ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಕ್ಯಾಪ್ಟನ್
Australia vs Ireland: ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ 16.5 ಓವರ್ಗಳಲ್ಲಿ 115 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ತನ್ನ ಮೊದಲ ಪಂದ್ಯದಲ್ಲಿ 67 ರನ್ಗಳ ಭರ್ಜರಿ ಜಯ ಸಾಧಿಸಿದೆ.
T20 World Cup 2026: ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ತಂಡ ಅಭಿಯಾನ ಆರಂಭಿಸಿದೆ. ಅದು ಕೂಡ ಟ್ರಾವಿಸ್ ಹೆಡ್ ಮುಂದಾಳತ್ವದಲ್ಲಿ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ 14ನೇ ಪಂದ್ಯದಲ್ಲಿ ಐರ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದ ಟ್ರಾವಿಸ್ ಹೆಡ್.
ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಅಭ್ಯಾಸದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಐರ್ಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಗಾಯವು ಗಂಭೀರವಾಗಿರುವ ಕಾರಣ ಅವರು ಮುಂದಿನ ಪಂದ್ಯಗಳಲ್ಲಿ ಕಣಕ್ಕಿಳಿಯುವುದರ ಬಗ್ಗೆ ಖಚಿತತೆ ಇಲ್ಲ. ಹೀಗಾಗಿ ಮೀಸಲು ಆಟಗಾರನಾಗಿ ಸ್ಟೀವ್ ಸ್ಮಿತ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.
ಇತ್ತ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಟ್ರಾವಿಸ್ ಹೆಡ್ ಮುನ್ನಡೆಸಿದ್ದಾರೆ. ಇನ್ನು ಮುಂದಿನ ಪಂದ್ಯದಿಂದಲೂ ಮಾರ್ಷ್ ಹೊರಗುಳಿಯುವ ಸಾಧ್ಯತೆಯಿದ್ದು, ಹೀಗಾಗಿ ಝಿಂಬಾಬ್ವೆ ವಿರುದ್ಧ ಕೂಡ ಹೆಡ್ ಸಾರಥ್ಯದಲ್ಲಿ ಆಸ್ಟ್ರೇಲಿಯಾ ಕಣಕ್ಕಿಳಿಯಲಿದೆ.
ಇನ್ನು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ 16.5 ಓವರ್ಗಳಲ್ಲಿ 115 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ತನ್ನ ಮೊದಲ ಪಂದ್ಯದಲ್ಲಿ 67 ರನ್ಗಳ ಭರ್ಜರಿ ಜಯ ಸಾಧಿಸಿದೆ.
