ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ
ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ಘಟನೆಯೊಂದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಕ್ಷದ ನಾಯಕರೊಬ್ಬರು ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಕೆಯ ಪತಿ ಅಕ್ರಮ ಸಂಬಂಧ ಶಂಕಿಸಿ ಸಹಚರರೊಂದಿಗೆ ದಾಳಿ ನಡೆಸಿದ್ದಾನೆ. ನಾಯಕ ಮತ್ತು ಮಹಿಳೆ ಮೇಲೆ ಹಲ್ಲೆ ನಡೆಸಿ, ಕಾರನ್ನು ಜಖಂಗೊಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಪತಿ ಮತ್ತು ಸಹಚರರ ವಿರುದ್ಧ ಸಾರ್ವಜನಿಕ ಶಾಂತಿ ಭಂಗ ಮತ್ತು ಹಲ್ಲೆ ಆರೋಪದಡಿ ಪ್ರಕರಣ ದಾಖಲಾಗಿದೆ.
ತಮಿಳುನಾಡಿನ ತಿರುಚ್ಚಿಯಲ್ಲಿ (Trichy) ನಡೆದ ಘಟನೆ ರಾಜ್ಯ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಕ್ಷವೊಂದರ ಪ್ರಮುಖ ನಾಯಕನೊಬ್ಬ ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆ ಮಹಿಳೆಯ ಪತಿ ತನ್ನ ಸಹಚರರೊಂದಿಗೆ ಕಾರನ್ನು ಅಡ್ಡಗಟ್ಟಿದ್ದಾನೆ. ಮಹಿಳೆಯ ಪತಿ ಮತ್ತು ಅವನ ತಂಡವು ಕಾರ್ ನಲ್ಲಿದ್ದ ಪಕ್ಷದ ನಾಯಕ ಮತ್ತು ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೆ, ಆವೇಶದಲ್ಲಿ ಕಾರನ್ನು ಸಂಪೂರ್ಣವಾಗಿ ಜಖಂಗೊಳಿಸಿದ್ದಾರೆ. ಅಕ್ರಮ ಸಂಬಂಧದ ಶಂಕೆಯಿಂದ ಈ ದಾಳಿ ಮಾಡಿದ್ದಾನೆ. ನ್ನ ಪತ್ನಿ ಆ ನಾಯಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂಬ ದ್ವೇಷದಿಂದ ಪತಿಯು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಗಲಾಟೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಮಾಡಿದ್ದಕ್ಕಾಗಿ ಮತ್ತು ಹಲ್ಲೆ ನಡೆಸಿದ್ದಕ್ಕಾಗಿ ಮಹಿಳೆಯ ಪತಿ ಮತ್ತು ಅವನ ಸಹಚರರ ಮೇಲೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ