AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿಯಲ್ಲಿ ಸಿನಿಮಾ ಶೂಟಿಂಗ್

ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿಯಲ್ಲಿ ಸಿನಿಮಾ ಶೂಟಿಂಗ್

ಮದನ್​ ಕುಮಾರ್​
|

Updated on: Nov 29, 2026 | 2:01 PM

Share

ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರು ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣಕ್ಕಾಗಿ ಬಂದಿರುವುದು ಖಚಿತವಾಗಿದ್ದರೂ, ಇದು ಯಾವ ಸಿನಿಮಾ ಹಾಗೂ ಈ ಚಿತ್ರದಲ್ಲಿ ಅವರ ಪಾತ್ರ ಏನು ಎಂಬ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಚಿತ್ರತಂಡವು ಈ ಕುರಿತು ಗೌಪ್ಯತೆ ಕಾಪಾಡಿಕೊಂಡಿದೆ.

ಶಿವಮೊಗ್ಗ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರು ಮಲೆನಾಡಿನ ಮಡಿಲಿಗೆ ಬಂದಿಳಿದಿದ್ದಾರೆ. ಸಿನಿಮಾ ಚಿತ್ರೀಕರಣದ ಸಲುವಾಗಿ ತಮಿಳು ಬೆಡಗಿ ತ್ರಿಷಾ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದು, ಸ್ಥಳೀಯರಲ್ಲಿ ಸಂಭ್ರಮ ಮನೆಮಾಡಿದೆ. ತಮ್ಮ ನೆಚ್ಚಿನ ನಟಿಯನ್ನು ತೀರ್ಥಹಳ್ಳಿಯಲ್ಲಿ ಕಂಡು ಸ್ಥಳೀಯ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಸದ್ಯ ನಟಿ ತ್ರಿಷಾ ಅವರು ತೀರ್ಥಹಳ್ಳಿಯ ತೀರ್ಥರಾಮೇಶ್ವರ ಹೋಟೆಲ್‌ನಲ್ಲಿ ತಂಗಿದ್ದಾರೆ. ಈ ನಡುವೆ, ಅವರು ಹೋಟೆಲ್ ಲಿಫ್ಟ್‌ನಲ್ಲಿ ತೆರಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ. ತ್ರಿಷಾ ಕೃಷ್ಣನ್ ಅವರು ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣಕ್ಕಾಗಿ ಬಂದಿರುವುದು ಖಚಿತವಾಗಿದ್ದರೂ, ಇದು ಯಾವ ಸಿನಿಮಾ ಮತ್ತು ಈ ಚಿತ್ರದಲ್ಲಿ ಅವರ ಪಾತ್ರವೇನು ಎಂಬ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಚಿತ್ರತಂಡವು ಈ ಕುರಿತು ಗೌಪ್ಯತೆ ಕಾಪಾಡಿಕೊಂಡಿದ್ದು, ತ್ರಿಷಾ ಅವರ ನೂತನ ಪ್ರಾಜೆಕ್ಟ್ ಗುಟ್ಟು ಸದ್ಯ ಸೀಕ್ರೆಟ್ ಆಗಿಯೇ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More