ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿಯಲ್ಲಿ ಸಿನಿಮಾ ಶೂಟಿಂಗ್
ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರು ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣಕ್ಕಾಗಿ ಬಂದಿರುವುದು ಖಚಿತವಾಗಿದ್ದರೂ, ಇದು ಯಾವ ಸಿನಿಮಾ ಹಾಗೂ ಈ ಚಿತ್ರದಲ್ಲಿ ಅವರ ಪಾತ್ರ ಏನು ಎಂಬ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಚಿತ್ರತಂಡವು ಈ ಕುರಿತು ಗೌಪ್ಯತೆ ಕಾಪಾಡಿಕೊಂಡಿದೆ.
ಶಿವಮೊಗ್ಗ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರು ಮಲೆನಾಡಿನ ಮಡಿಲಿಗೆ ಬಂದಿಳಿದಿದ್ದಾರೆ. ಸಿನಿಮಾ ಚಿತ್ರೀಕರಣದ ಸಲುವಾಗಿ ತಮಿಳು ಬೆಡಗಿ ತ್ರಿಷಾ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದು, ಸ್ಥಳೀಯರಲ್ಲಿ ಸಂಭ್ರಮ ಮನೆಮಾಡಿದೆ. ತಮ್ಮ ನೆಚ್ಚಿನ ನಟಿಯನ್ನು ತೀರ್ಥಹಳ್ಳಿಯಲ್ಲಿ ಕಂಡು ಸ್ಥಳೀಯ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಸದ್ಯ ನಟಿ ತ್ರಿಷಾ ಅವರು ತೀರ್ಥಹಳ್ಳಿಯ ತೀರ್ಥರಾಮೇಶ್ವರ ಹೋಟೆಲ್‌ನಲ್ಲಿ ತಂಗಿದ್ದಾರೆ. ಈ ನಡುವೆ, ಅವರು ಹೋಟೆಲ್ ಲಿಫ್ಟ್‌ನಲ್ಲಿ ತೆರಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ. ತ್ರಿಷಾ ಕೃಷ್ಣನ್ ಅವರು ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣಕ್ಕಾಗಿ ಬಂದಿರುವುದು ಖಚಿತವಾಗಿದ್ದರೂ, ಇದು ಯಾವ ಸಿನಿಮಾ ಮತ್ತು ಈ ಚಿತ್ರದಲ್ಲಿ ಅವರ ಪಾತ್ರವೇನು ಎಂಬ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಚಿತ್ರತಂಡವು ಈ ಕುರಿತು ಗೌಪ್ಯತೆ ಕಾಪಾಡಿಕೊಂಡಿದ್ದು, ತ್ರಿಷಾ ಅವರ ನೂತನ ಪ್ರಾಜೆಕ್ಟ್ ಗುಟ್ಟು ಸದ್ಯ ಸೀಕ್ರೆಟ್ ಆಗಿಯೇ ಉಳಿದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
