ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

Updated on: May 14, 2026 | 10:31 PM

ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ನಟಿಸಲಿರುವ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ತ್ರಿಶಾ ಕೃಷ್ಣನ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಆದರೆ ಸದ್ಯಕ್ಕೆ ಈ ಮಾಹಿತಿ ಕೇವಲ ಅಂತೆ-ಕಂತೆಯ ಹಂತದಲ್ಲಿ ಇದೆ. ಅಧಿಕೃತ ಮಾಹಿತಿಗಾಗಿ ಫ್ಯಾನ್ಸ್ ಕಾದಿದ್ದಾರೆ.

ರಜನಿಕಾಂತ್ ಮತ್ತು ಕಮಲ್ ಹಾಸನ್ (Kamal Haasan) ಒಟ್ಟಿಗೆ ನಟಿಸಲಿರುವ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ತ್ರಿಶಾ ಕೃಷ್ಣನ್ (Trisha Krishnan) ಹೆಸರು ಬಲವಾಗಿ ಕೇಳಿಬರುತ್ತಿದೆ. ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ ಅವರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ ಕೃಷ್ಣನ್ ನಾಯಕಿ ಆಗಿದ್ದಾರೆ ಎಂಬ ವಿಷಯವನ್ನು ಚಿತ್ರತಂಡದ ಯಾರೊಬ್ಬರೂ ಇನ್ನೂ ಖಚಿತಪಡಿಸಿಲ್ಲ. ನಿರ್ಮಾಪಕರ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us