ಭೀಕರ ಅಪಘಾತದಿಂದ ಕೂದಲೆಳೆ ಅಂತರದಿಂದ ಪಾರಾದ ಜನರು; ವಿಡಿಯೋ ವೈರಲ್
ರಾಜಸ್ಥಾನದ ರಾಜಸಮಂದ್‌ನಲ್ಲಿ ಟ್ರಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಟೀ ಅಂಗಡಿಗೆ ಡಿಕ್ಕಿ ಹೊಡೆದ ಪರಿಣಾಮ ಪಕ್ಕದಲ್ಲಿದ್ದವರು ಕೂದಲೆಳೆಯ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಟ್ರಕ್ ಚಾಲಕನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.
ಜೈಪುರ, ಅಕ್ಟೋಬರ್ 15: ರಾಜಸ್ಥಾನದ (Rajasthan) ರಾಜಸಮಂದ್‌ನಲ್ಲಿ ಇಂದು ಬೆಳಿಗ್ಗೆ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಕೆಲ್ವಾ ಪೊಲೀಸ್ ಠಾಣೆ ಪ್ರದೇಶದಲ್ಲಿ ರಸ್ತೆ ಬದಿಯ ಟೀ ಅಂಗಡಿಗೆ ಡಿಕ್ಕಿ ಹೊಡೆದಿದೆ. ಆದರೆ, ಈ ವೇಳೆ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ತಕ್ಷಣ ಅಲ್ಲಿದ್ದವರು ಓಡಿದ್ದರಿಂದ ಅವರ ಜೀವ ಉಳಿದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದು, ಅಂಗಡಿಯಲ್ಲಿದ್ದ ಹಲವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯಾವಳಿ ಅಂಗಡಿಯ ಹೊರಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

