ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಭಾವ್‌ಗಢ್ ಫಾಂಟೆ ಬಳಿಯ ಮ್ಹೌ-ನೀಮುಚ್ ಹೆದ್ದಾರಿಯಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಕಾರಿನೊಳಗಿದ್ದ ಇಬ್ಬರೂ ಪ್ರಯಾಣಿಕರು ಅಪಘಾತದಿಂದ ಯಾವುದೇ ಹಾನಿಯಾಗದಂತೆ ಪಾರಾಗಿದ್ದಾರೆ. ಸೆಂಟ್ರೊ ಕಾರು ಲೇನ್ ಬದಲಾಯಿಸುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸಮಯಕ್ಕೆ ಸರಿಯಾಗಿ ಬ್ರೇಕ್ ಹಾಕಲು ಸಾಧ್ಯವಾಗದ ಕಾರಣದಿಂದ ಟ್ರಕ್ ಕಾರನ್ನು ಹೆದ್ದಾರಿಯಲ್ಲಿ ಬಹಳ ದೂರದವರೆಗೆ ಎಳೆದುಕೊಂಡು ಹೋಗುತ್ತಲೇ ಇತ್ತು.
ಮಂದ್ಸೌರ್, ಜೂನ್ 20: ಮಧ್ಯಪ್ರದೇಶದ ಮಂದ್ಸೌರ್‌ನಲ್ಲಿ ಗುರುವಾರ ಸಂಜೆ (ಜೂನ್ 20) ವೇಗವಾಗಿ ಬಂದ ಟ್ರಕ್ ಲೇನ್ ಬದಲಾಯಿಸುತ್ತಿದ್ದ ಕಾರನ್ನು ಹಿಂಬಾಲಿಸಿ 100 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಪರಿಣಾಮ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ಭಾವ್‌ಗಢ್ ಫಾಂಟೆ ಬಳಿಯ ಮ್ಹೌ-ನೀಮುಚ್ ಹೆದ್ದಾರಿಯಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಕಾರಿನೊಳಗಿದ್ದ ಇಬ್ಬರೂ ಪ್ರಯಾಣಿಕರು ಅಪಘಾತದಿಂದ ಯಾವುದೇ ಹಾನಿಯಾಗದಂತೆ ಪಾರಾಗಿದ್ದಾರೆ.
ಸೆಂಟ್ರೊ ಕಾರು ಲೇನ್ ಬದಲಾಯಿಸುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸಮಯಕ್ಕೆ ಸರಿಯಾಗಿ ಬ್ರೇಕ್ ಹಾಕಲು ಸಾಧ್ಯವಾಗದ ಕಾರಣದಿಂದ ಟ್ರಕ್ ಕಾರನ್ನು ಹೆದ್ದಾರಿಯಲ್ಲಿ ಬಹಳ ದೂರದವರೆಗೆ ಎಳೆದುಕೊಂಡು ಹೋಗುತ್ತಲೇ ಇತ್ತು. ದಲೋಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!

ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು

ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು

ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
