ದೇವನಹಳ್ಳಿ ಬಳಿ ಭೀಕರ ಅಪಘಾತ: ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ್

Edited By:

Updated on: Mar 06, 2026 | 8:52 AM

ದೇವನಹಳ್ಳಿ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಯಾಂಟರ್ ಲಾರಿಯೊಂದು ಯದ್ವಾತದ್ವಾ ಚಲಿಸಿ ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆಯ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗಿದೆ. ಸದ್ಯ, ವಿಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ.

ದೇವನಹಳ್ಳಿ, ಮಾರ್ಚ್ 6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಕ್ಯಾಂಟರ್ ಹೆದ್ದಾರಿಯಲ್ಲಿ ಉರುಳಿಬಿದ್ದು ನಂತರವೂ ತುಸು ದೂರ ಜಾರಿಕೊಂಡು ಹೋಗಿದೆ. ಈ ಭಯಾನಕ ಘಟನೆಯ ವಿಡಿಯೋ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕ್ಯಾಂಟರ್ ಅಡ್ಡಾದಿಡ್ಡಿಯಾಗಿ ಹೆದ್ದಾರಿಯಲ್ಲಿ ಚಲಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಾಣಿಸುತ್ತದೆ. ಕೆಲವು ಕ್ಷಣಗಳಲ್ಲೇ ನಿಯಂತ್ರಣ ತಪ್ಪಿದ ಕ್ಯಾಂಟರ್ ರಸ್ತೆಯ ಮಧ್ಯೆ ಉರುಳಿಬಿದ್ದು ಭೀಕರ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿ ಚಾಲನೆ ಮಾಡಿರುವುದೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮೂರು ಬೈಕ್‌ಗಳು, ಒಂದು ಕಾರು ಹಾಗೂ ಒಂದು ಟಿಪ್ಪರ್ ಅಪಾಯದಿಂದ ಪಾರಾಗಿವೆ. ನಾಲ್ಕೈದು ವಾಹನಗಳ ಮಧ್ಯೆ ನುಗ್ಗಿಬಂದ ಕ್ಯಾಂಟರ್ ಕೊನೆಗೆ ಖಾಲಿ ರಸ್ತೆಯಲ್ಲಿ ಉರುಳಿಬಿದ್ದಿದೆ.

ಅಪಘಾತದ ರಭಸಕ್ಕೆ ರಸ್ತೆ ತುಂಬಾ ದಟ್ಟವಾದ ಧೂಳು ಆವರಿಸಿಕೊಂಡಿದ್ದು, ಕೆಲ ಕ್ಷಣಗಳ ಕಾಲ ಸುತ್ತಮುತ್ತ ಗಾಬರಿ ಮೂಡಿಸಿತು. ಸ್ಥಳದಲ್ಲಿದ್ದ ಸ್ಥಳೀಯರು ತಕ್ಷಣವೇ ಕ್ಯಾಂಟರ್ ಚಾಲಕನ ರಕ್ಷಣೆಗೆ ಧಾವಿಸಿದರು. ಅಪಘಾತ ಭೀಕರವಾಗಿದ್ದರೂ ಅದೃಷ್ಟವಶಾತ್ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More