ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ; ಓರ್ವ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಾಲೂಕಿನ ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅದೋಶಿ ಸುರಂಗದ ಬಳಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದು ದೊಡ್ಡ ಅಪಘಾತ ಸಂಭವಿಸಿದ್ದು, ಸುಮಾರು 20 ವಾಹನಗಳು ಅದರಲ್ಲಿ ಸಿಲುಕಿಕೊಂಡಿವೆ. ಇದರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಈ ಘಟನೆಯು ಸುಮಾರು 20 ರಿಂದ 25 ವಾಹನಗಳನ್ನು ಒಳಗೊಂಡ ಭಾರಿ ರಾಶಿಗೆ ಕಾರಣವಾಯಿತು. ಸುಮಾರು 20 ರಿಂದ 21 ಜನರು ಗಾಯಗೊಂಡಿದ್ದು, ಎಲ್ಲರನ್ನೂ ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳಲ್ಲಿ ಒಬ್ಬ ಮಹಿಳೆ ನಂತರ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದರು.
ಮುಂಬೈ, ಜುಲೈ 26: ರಾಯಗಢ (Raigarh) ಜಿಲ್ಲೆಯ ಖಲಾಪುರ್ ತಾಲೂಕಿನ ಖೋಪೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೋಶಿ ಸುರಂಗದ ಬಳಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ (Mumbai- Pune Expressway) ಭೀಕರ ಅಪಘಾತ ಸಂಭವಿಸಿದೆ. ಜೋರಾಗಿ ಮಳೆ ಬರುತ್ತಿದ್ದುದರಿಂದ ಇಳಿಜಾರಿನಲ್ಲಿ ಇಳಿಯುವಾಗ ಕಂಟೇನರ್ ಟ್ರಕ್ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಕಂಟೇನರ್ ಟ್ರೇಲರ್ ಟ್ರಕ್ ಬ್ರೇಕ್ ವೈಫಲ್ಯದ ನಂತರ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿದಂತೆ 20ರಿಂದ 25 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ (Road Accident) ಒಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುಮಾರು 20 ರಿಂದ 21 ಜನರು ಗಾಯಗೊಂಡಿದ್ದು, ಎಲ್ಲರನ್ನೂ ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳಲ್ಲಿ ಒಬ್ಬ ಮಹಿಳೆ ನಂತರ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ