Video: ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ ದೀಪಾವಳಿ ಆಚರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್

Updated on: Oct 22, 2025 | 8:09 AM

ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿದ ಟ್ರಂಪ್ ಮಹಾನ್ ವ್ಯಕ್ತಿ ಎಂದು ಕರೆದರು. ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಭಾರತಕ್ಕೆ ಹೊಸ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಭಾಗವಹಿಸಿದ್ದರು.

ವಾಷಿಂಗ್ಟನ್, ಅಕ್ಟೋಬರ್ 22: ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿದ ಟ್ರಂಪ್ ಮಹಾನ್ ವ್ಯಕ್ತಿ ಎಂದು ಕರೆದರು. ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಭಾರತಕ್ಕೆ ಹೊಸ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಭಾಗವಹಿಸಿದ್ದರು.

ನಾನು ಇಂದು ನಿಮ್ಮ ಪ್ರಧಾನಿಯೊಂದಿಗೆ ಮಾತನಾಡಿದೆ. ನಾವು ಉತ್ತಮ ಸಂಭಾಷಣೆ ನಡೆಸಿದ್ದೇವೆ. ನಾವು ವ್ಯಾಪಾರದ ಬಗ್ಗೆ ಮಾತನಾಡಿದ್ದೇವೆ. ನಾವು ಬಹಳಷ್ಟು ವಿಷಯಗಳ ಬಗ್ಗೆ ಮಾತನಾಡಿದ್ದೇವೆ. ಭಾರತವು ರಷ್ಯಾದಿಂದ ಹೆಚ್ಚಿನ ತೈಲವನ್ನು ಖರೀದಿಸುವುದಿಲ್ಲ ಎಂದು ತಮಗೆ ಭರವಸೆ ನೀಡಿದ್ದಾರೆಂದು ಟ್ರಂಪ್ ಪುನರುಚ್ಚರಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 22, 2025 08:07 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More