Video: ಒಬಾಮಾ ಬಂಧನ? ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಟ್ರಂಪ್ ಹಂಚಿಕೊಂಡ ವಿಡಿಯೋದಲ್ಲೇನಿದೆ?
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾರಾನ್ನು ಬಂಧಿಸಲಾಗಿದೆಯೇ? ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ವಿಡಿಯೋವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅವರು ತಮ್ಮ ಸಾಮಾಜಿಕ ಜಾಲತಾಣವಾದ ಟ್ರುತ್ನಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದು, ಅದರಲ್ಲಿ ಎಫ್ಬಿಐ ಏಜೆಂಟರು ಒಬಾಮಾ ಅವರನ್ನು ಬಂಧಿಸುತ್ತಿರುವುದನ್ನು ಕಾಣಬಹುದು. ಜತೆಗೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂಬ ಬರಹವೂ ಇದೆ.
ವಾಷಿಂಗ್ಟನ್, ಜುಲೈ 21: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾರಾನ್ನು ಬಂಧಿಸಲಾಗಿದೆಯೇ? ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ವಿಡಿಯೋವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅವರು ತಮ್ಮ ಸಾಮಾಜಿಕ ಜಾಲತಾಣವಾದ ಟ್ರುತ್ನಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದು, ಅದರಲ್ಲಿ ಎಫ್ಬಿಐ ಏಜೆಂಟರು ಒಬಾಮಾ ಅವರನ್ನು ಬಂಧಿಸುತ್ತಿರುವುದನ್ನು ಕಾಣಬಹುದು. ಜತೆಗೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂಬ ಬರಹವೂ ಇದೆ.
ಆದರೆ ಅದು ಎಐ ಅಂದರೆ ಕೃತಕ ಬುದ್ಧಿಮತ್ತೆ ಸಹಾಯದಿಂದ ಸಿದ್ಧಪಡಿಸಿರುವ ವಿಡಿಯೋವಾಗಿದೆ.
ಆ ವಿಡಿಯೋದಲ್ಲಿ ಇಬ್ಬರು ಏಜೆಂಟರು ಒಬಾಮಾ ಅವರ ಕೈಗೆ ಕೋಳ ತೊಡಿಸಿ ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಪಕ್ಕದಲ್ಲೇ ಟ್ರಂಪ್ ನಗುತ್ತಾ ಕುಳಿತಿರುವುದನ್ನು ನೋಡಬಹುದು. ವಿಡಿಯೋದ ಕೊನೆಯಲ್ಲಿ ಒಬಾಮಾ ಜೈಲಿನಲ್ಲಿ ಕೈದಿಯ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವಿಡಿಯೋ ನಕಲಿ ಎಂದು ಟ್ರಂಪ್ ತಮ್ಮ ಪೋಸ್ಟ್ನಲ್ಲಿ ಸ್ಪಷ್ಟಪಡಿಸಿಲ್ಲ.ಯಾವುದೇ ಸ್ಪಷ್ಟೀಕರಣವಿಲ್ಲದೆ ಟ್ರಂಪ್ ಈ ವೀಡಿಯೊವನ್ನು ಪೋಸ್ಟ್ ಮಾಡಿರುವುದು ಅತ್ಯಂತ ಬೇಜವಾಬ್ದಾರಿತನ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಟ್ರಂಪ್ ಇತ್ತೀಚೆಗೆ ಒಬಾಮಾ ಅವರ ಮೇಲೆ ಚುನಾವಣಾ ವಂಚನೆ ಆರೋಪ ಹೊರಿಸಿದ್ದ ಸಮಯದಲ್ಲಿ ಈ ವೀಡಿಯೊ ಕಾಣಿಸಿಕೊಂಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

