Video: ಒಬಾಮಾ ಬಂಧನ? ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಟ್ರಂಪ್ ಹಂಚಿಕೊಂಡ ವಿಡಿಯೋದಲ್ಲೇನಿದೆ?

Updated on: Jul 21, 2025 | 9:32 AM

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾರಾನ್ನು ಬಂಧಿಸಲಾಗಿದೆಯೇ? ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಂಚಿಕೊಂಡ ವಿಡಿಯೋವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅವರು ತಮ್ಮ ಸಾಮಾಜಿಕ ಜಾಲತಾಣವಾದ ಟ್ರುತ್​ನಲ್ಲಿ ಒಂದು ವಿಡಿಯೋ ಪೋಸ್ಟ್​ ಮಾಡಿದ್ದು, ಅದರಲ್ಲಿ ಎಫ್​ಬಿಐ ಏಜೆಂಟರು ಒಬಾಮಾ ಅವರನ್ನು ಬಂಧಿಸುತ್ತಿರುವುದನ್ನು ಕಾಣಬಹುದು. ಜತೆಗೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂಬ ಬರಹವೂ ಇದೆ.

ವಾಷಿಂಗ್ಟನ್, ಜುಲೈ 21: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾರಾನ್ನು ಬಂಧಿಸಲಾಗಿದೆಯೇ? ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಂಚಿಕೊಂಡ ವಿಡಿಯೋವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅವರು ತಮ್ಮ ಸಾಮಾಜಿಕ ಜಾಲತಾಣವಾದ ಟ್ರುತ್​ನಲ್ಲಿ ಒಂದು ವಿಡಿಯೋ ಪೋಸ್ಟ್​ ಮಾಡಿದ್ದು, ಅದರಲ್ಲಿ ಎಫ್​ಬಿಐ ಏಜೆಂಟರು ಒಬಾಮಾ ಅವರನ್ನು ಬಂಧಿಸುತ್ತಿರುವುದನ್ನು ಕಾಣಬಹುದು. ಜತೆಗೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂಬ ಬರಹವೂ ಇದೆ.

ಆದರೆ ಅದು ಎಐ ಅಂದರೆ ಕೃತಕ ಬುದ್ಧಿಮತ್ತೆ ಸಹಾಯದಿಂದ ಸಿದ್ಧಪಡಿಸಿರುವ ವಿಡಿಯೋವಾಗಿದೆ.
ಆ ವಿಡಿಯೋದಲ್ಲಿ ಇಬ್ಬರು ಏಜೆಂಟರು ಒಬಾಮಾ ಅವರ ಕೈಗೆ ಕೋಳ ತೊಡಿಸಿ ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಪಕ್ಕದಲ್ಲೇ ಟ್ರಂಪ್ ನಗುತ್ತಾ ಕುಳಿತಿರುವುದನ್ನು ನೋಡಬಹುದು. ವಿಡಿಯೋದ ಕೊನೆಯಲ್ಲಿ ಒಬಾಮಾ ಜೈಲಿನಲ್ಲಿ ಕೈದಿಯ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವಿಡಿಯೋ ನಕಲಿ ಎಂದು ಟ್ರಂಪ್ ತಮ್ಮ ಪೋಸ್ಟ್​​ನಲ್ಲಿ ಸ್ಪಷ್ಟಪಡಿಸಿಲ್ಲ.ಯಾವುದೇ ಸ್ಪಷ್ಟೀಕರಣವಿಲ್ಲದೆ ಟ್ರಂಪ್ ಈ ವೀಡಿಯೊವನ್ನು ಪೋಸ್ಟ್ ಮಾಡಿರುವುದು ಅತ್ಯಂತ ಬೇಜವಾಬ್ದಾರಿತನ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಟ್ರಂಪ್ ಇತ್ತೀಚೆಗೆ ಒಬಾಮಾ ಅವರ ಮೇಲೆ ಚುನಾವಣಾ ವಂಚನೆ ಆರೋಪ ಹೊರಿಸಿದ್ದ ಸಮಯದಲ್ಲಿ ಈ ವೀಡಿಯೊ ಕಾಣಿಸಿಕೊಂಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More