AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ, ತೈಲಾಗಾರಗಳ ಮೇಲಿನ ದಾಳಿ ನಿಲ್ಲಿಸಲು ಎಚ್ಚರಿಕೆ

ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ, ತೈಲಾಗಾರಗಳ ಮೇಲಿನ ದಾಳಿ ನಿಲ್ಲಿಸಲು ಎಚ್ಚರಿಕೆ

ನಯನಾ ರಾಜೀವ್
|

Updated on: Oct 11, 2026 | 9:02 AM

Share

ದೆಹಲಿಯಲ್ಲಿ ಸಿಜೆಪಿ ಪಕ್ಷವು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬಾಂಗ್ಲಾದೇಶದ ಎನ್‌ಸಿಪಿ ಬೆಂಬಲ ನೀಡಿದೆ. ಎನ್‌ಸಿಪಿ ಸಂಚಾಲಕ ನಹಿದ್ ಇಸ್ಲಾಂ, ಇದು ಪ್ರಜಾಪ್ರಭುತ್ವ ರಕ್ಷಣೆಗಾಗಿನ ಹೋರಾಟ ಎಂದು ಹೇಳಿದ್ದಾರೆ. ವಿವಾದಿತ ಎಸ್​ಐಆರ್ ರದ್ದುಪಡಿಸುವಿಕೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಸಿಜೆಪಿ ಆಗ್ರಹಿಸಿದೆ. ಈ ಅಂತರಾಷ್ಟ್ರೀಯ ಬೆಂಬಲದೊಂದಿಗೆ ಭಾರತದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಹೊಸ ಆಯಾಮ ದೊರೆತಿದೆ.

ವಾಷಿಂಗ್ಟನ್, ಅಕ್ಟೋಬರ್ 11: ಯುದ್ಧ ಪೀಡಿತ ಉಕ್ರೇನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್ ನೀಡಿದ್ದಾರೆ. ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರ ಹಠಮಾರಿ ಧೋರಣೆಯಿಂದಲೇ ಯುದ್ಧ ಮುಂದುವರಿದಿದೆ ಎಂದು ನೇರವಾಗಿ ಆರೋಪಿಸಿರುವ ಟ್ರಂಪ್, ರಷ್ಯಾದ ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಝೆಲೆನ್‌ಸ್ಕಿ ಮನಸ್ಸು ಮಾಡಿದ್ದರೆ ಈ ಯುದ್ಧವನ್ನು ಹಲವು ಬಾರಿ ಕೊನೆಗೊಳಿಸಬಹುದಿತ್ತು, ಆದರೆ ಅವರು ಹಾಗೆ ಮಾಡಲಿಲ್ಲ. ಆರಂಭವೇ ಆಗಬಾರದಿದ್ದ ಈ ಯುದ್ಧದಲ್ಲಿ ಅವರು ರಷ್ಯಾದ ಡೀಸೆಲ್ ಘಟಕಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಈಗಾಗಲೇ ಇಂಧನ ಕೊರತೆಯಿದೆ. ಇಂತಹ ದಾಳಿಗಳಿಂದ ಅಮೆರಿಕದ ರೈತರಿಗೆ ಮತ್ತು ಜಗತ್ತಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ. ಆದ್ದರಿಂದ ಅವರು ಈ ದಾಳಿಗಳನ್ನು ನಿಲ್ಲಿಸುವುದು ಒಳಿತು” ಎಂದು ಟ್ರಂಪ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಇತ್ತೀಚೆಗಷ್ಟೇ ಅಮೆರಿಕವು ರಷ್ಯಾದಿಂದ ಡೀಸೆಲ್ ಆಮದು ಮಾಡಿಕೊಳ್ಳುವ ಒಪ್ಪಂದಕ್ಕೆ ಮುಂದಾಗಿದ್ದು, ಇದಕ್ಕೆ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿರುವುದು ಉಕ್ರೇನ್‌ಗೆ ಅಮೆರಿಕ ಬೆಂಬಲ ಕೈತಪ್ಪುತ್ತಿರುವುದರ ಸ್ಪಷ್ಟ ಮುನ್ಸೂಚನೆ ನೀಡಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More