AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರು ದಿನ ಬಳಿಕ, ಅರ್ಧ ಕಿಮೀ ದೂರದಲ್ಲಿ ನಾರಾಯಣ ಆಚಾರ್ ದೇಹ ಪತ್ತೆ

[lazy-load-videos-and-sticky-control id=”r24-RggcwI0″] ಕೊಡಗು:ಮಡಿಕೇರಿಯ ಬ್ರಹ್ಮಗಿರಿ ತಪ್ಪಲಿನ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ. ಗುಡ್ಡ ಕುಸಿದು 6 ದಿನಗಳ ನಂತರ ರಕ್ಷಣಾ ಸಿಬ್ಬಂದಿಯ ತೀವ್ರ ಹುಡುಕಾಟದ ನಂತರ ಇಂದು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ರವರ ಮೃತದೇಹ ಮಣ್ಣು ಬಿದ್ದ ಕಂದಕದೊಳಗೆ ಪತ್ತೆಯಾಗಿದೆ. ಕಂದಕದಿಂದ ಮೃತದೇಹವನ್ನು ರಕ್ಷಣಾ ಸಿಬ್ಬಂದಿಗಳು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಮೃತದೇಹ ಸಿಕ್ಕ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ […]

ಅರು ದಿನ ಬಳಿಕ, ಅರ್ಧ ಕಿಮೀ ದೂರದಲ್ಲಿ ನಾರಾಯಣ ಆಚಾರ್ ದೇಹ ಪತ್ತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 11, 2020 | 5:30 PM

Share

[lazy-load-videos-and-sticky-control id=”r24-RggcwI0″]

ಕೊಡಗು:ಮಡಿಕೇರಿಯ ಬ್ರಹ್ಮಗಿರಿ ತಪ್ಪಲಿನ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.

ಗುಡ್ಡ ಕುಸಿದು 6 ದಿನಗಳ ನಂತರ ರಕ್ಷಣಾ ಸಿಬ್ಬಂದಿಯ ತೀವ್ರ ಹುಡುಕಾಟದ ನಂತರ ಇಂದು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ರವರ ಮೃತದೇಹ ಮಣ್ಣು ಬಿದ್ದ ಕಂದಕದೊಳಗೆ ಪತ್ತೆಯಾಗಿದೆ. ಕಂದಕದಿಂದ ಮೃತದೇಹವನ್ನು ರಕ್ಷಣಾ ಸಿಬ್ಬಂದಿಗಳು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಮೃತದೇಹ ಸಿಕ್ಕ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

ನಿರಂತರ ಕಾರ್ಯಾಚರಣೆ ಬಳಿಕ ಮೃತದೇಹ ಸಿಕ್ಕ ಸ್ಥಳದಲ್ಲಿಯೇ ಕಾರು, ಸ್ಕೂಟರ್​, ಹಣ, ಪೂಜಾ ಸಾಮಾಗ್ರಿಗಳು ಕೂಡಾ ದೊರೆತಿದೆ. ಹೀಗಾಗಿ ಇದೇ ಪ್ರದೇಶದಲ್ಲಿ ಉಳಿದ ದೇಹಗಳಿಗಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಉಸ್ತುವಾರಿ ಸಚಿವ ಸೋಮಣ್ಣ ಟಿವಿ9 ಗೆ ತಿಳಿಸಿದ್ದಾರೆ.

ನಾರಾಯಣ ಆಚಾರ್​ರವರ ಮೃತದೇಹ ಸಿಕ್ಕ ಹಿನ್ನೆಲೆಯಿಂದಾಗಿ ಪತ್ನಿ ಹಾಗೂ ಇಬ್ಬರು ಪುರೋಹಿತರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹಾಗೂ ಕೆಲ ಹೊತ್ತಿನಲ್ಲೇ ನಾರಾಯಣಾಚಾರ್​ರವರ ಮೃತದೇಹವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಿದ್ದು ಇಂದು ಅಥವಾ ನಾಳೆ ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

Published On - 3:39 pm, Tue, 11 August 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ