ಎರಡು ಟ್ರಾಕ್ಟರು‌ಗಳ ನಡುವೆ ಜಗ್ಗೋ ಆಟ! ತುಂಡಾದ ಟ್ರ್ಯಾಕ್ಟರ್, ಚಾಲಕ ಏನಾದ ನೋಡಿ!

Edited By: ಸಾಧು ಶ್ರೀನಾಥ್​

Updated on: Sep 16, 2023 | 1:22 PM

ವಿಜಯಪುರ: ಗ್ರಾಮೀಣ ಭಾಗದ ಜನರು ತಮ್ಮ ಮನರಂಜನೆಗಾಗಿ, ತಮ್ಮಲ್ಲಿನ ಶಕ್ತಿ ಸಾಮರ್ಥ್ಯಗಳ ಪ್ರದರ್ಶನಕ್ಕಾಗಿ ನಾನಾ ಸ್ಪರ್ಧೆಗಳಲ್ಲಿ ತೊಡಗುವುದುಂಟು. ತಮ್ಮಲ್ಲಿ ಲಭ್ಯವಿರುವ ಸಾಧನ ಸಲಕರಣೆಗಳನ್ನೇ ಬಳಸಿ, ಪ್ರತಿಭೆಯನ್ನು ಓರೆಗೆ ಹಚ್ಚುವುದು ಉಂಟು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ಜಾತ್ರೆ ನಿಮಿತ್ಯ ನಡೆದ ಸ್ಪರ್ಧೆಯೂ ಹೀಗೇ ಚಿತ್ತಾಕರ್ಷಕವಾಗಿತ್ತು.

ವಿಜಯಪುರ, ಸೆಪ್ಟೆಂಬರ್​ 16: ಗ್ರಾಮೀಣ ಭಾಗದ ಜನರು ತಮ್ಮ ಮನರಂಜನೆಗಾಗಿ, ತಮ್ಮಲ್ಲಿನ ಶಕ್ತಿ ಸಾಮರ್ಥ್ಯಗಳ ಪ್ರದರ್ಶನಕ್ಕಾಗಿ ನಾನಾ ಸ್ಪರ್ಧೆಗಳಲ್ಲಿ ತೊಡಗುವುದುಂಟು. ತಮ್ಮಲ್ಲಿ ಲಭ್ಯವಿರುವ ಸಾಧನ ಸಲಕರಣೆಗಳನ್ನೇ ಬಳಸಿ, ಪ್ರತಿಭೆಯನ್ನು ಓರೆಗೆ ಹಚ್ಚುವುದು ಉಂಟು. ವಿಜಯಪುರ ಜಿಲ್ಲೆ ಮುದ್ದೇಬಿಹಾಳ (Muddebihal) ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ಜಾತ್ರೆ ನಿಮಿತ್ಯ ನಡೆದ ಸ್ಪರ್ಧೆಯೂ ಹೀಗೇ ಚಿತ್ತಾಕರ್ಷಕವಾಗಿತ್ತು. ಎರಡು ಟ್ರಾಕ್ಟರು‌ಗಳ ನಡುವಣ ಜಗ್ಗಾಟದ (Tug of War) ಸ್ಪರ್ಧೆ ಅದಾಗಿತ್ತು.

ಆ ವೇಳೆ ನಡೆದ ಸಣ್ಣ ಅವಘಡದಲ್ಲಿ ಎರಡು ಟ್ರಾಕ್ಟರ್​​ಗಳು ತುಂಡಾಗಿವೆ. ಬಸವೇಶ್ವರ ದೇವರ ಜಾತ್ರೆಯ ನಿಮಿತ್ಯ ಟ್ರ್ಯಾಕ್ಟರ್ ನಿಂದ ಟ್ರ್ಯಾಕ್ಟರ್ (Tractor) ಜಗ್ಗಿಸುವ ಸ್ಪರ್ಧೆಯನ್ನು ಗ್ರಾಮಸ್ಥರು ಆಯೋಜನೆ ಮಾಡಿದ್ದರು. ಟ್ರ್ಯಾಕ್ಟರ್ ಎರಡು ತುಂಡಾಗುತ್ತಲೇ ಚಾಲಕ ಸ್ಪಲ್ಪದರಲ್ಲೇ ಪಾರಾಗಿದ್ದಾನೆ. ಟ್ರ್ಯಾಕ್ಟರ್ ಎಳೆಯುವ ಸ್ಪರ್ಧೆಯಲ್ಲಿ ಗೆದ್ದ ಚಾಲಕನಿಗೆ (Driver) 20 ಸಾವಿರ ರೂಪಾಯಿ ಬಹುಮಾನ ವಿತರಣೆಯಾಯಿತು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More