AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು

ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು

ಮಂಗಳ ರಾಜ್
| Edited By: |

Updated on: Jun 17, 2026 | 8:21 PM

Share

‘ಬಿಗ್ ಬಾಸ್ ಕನ್ನಡ 13’ ಆರಂಭಕ್ಕೆ ತಯಾರಿ ನಡೆದಿದೆ. ಮಾಜಿ ಸ್ಪರ್ಧಿ ತುಕಾಲಿ ಸಂತು ಈ ಬಗ್ಗೆ ಮಾತನಾಡಿದ್ದಾರೆ. ‘ಜನರೆಲ್ಲ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದ ಸಲ 18ರ ತನಕ ಟಿಆರ್​ಪಿ ಬಂದಿತ್ತು. ಈ ಬಾರಿ 30 ಮುಟ್ಟುತ್ತಾ ಅಂತ ನನಗೆ ಭಯ ಆಗುತ್ತಿದೆ’ ಎಂದು ಸಂತು ಹೇಳಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಆರಂಭಕ್ಕೆ ತಯಾರಿ ನಡೆದಿದೆ. ಮಾಜಿ ಸ್ಪರ್ಧಿ ತುಕಾಲಿ ಸಂತು ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಶುರುವಾಗಲು ಇನ್ನೂ 2 ತಿಂಗಳು ಬಾಕಿ ಇದೆ. ನನಗೆ ಎಗ್ಸೈಟ್​ಮೆಂಟ್ ತಡೆಯಲು ಆಗುತ್ತಿಲ್ಲ. ವಿಡಿಯೋ ಮಾಡಿ ಕಳಿಸಿ ಅಂತ ತಲೆಗೆ ಹುಳ ಬಿಟ್ಟಿದ್ದಾರೆ. ಜನರೆಲ್ಲ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದ ಬಾರಿ 18ರ ತನಕ ಟಿಆರ್​ಪಿ ಬಂದಿತ್ತು. ಈ ಸಲ 30 ಮುಟ್ಟುತ್ತಾ ಅಂತ ನನಗೆ ಭಯ ಆಗುತ್ತಿದೆ. ಈ ಬಾರಿ ಖಂಡಿತವಾಗಿ ದೊಡ್ಡ ಮಟ್ಟಕ್ಕೆ ರೀಚ್ ಆಗುತ್ತದೆ. ಜನರಲ್ಲಿ ಒಂದು ಅಲೆ ಶುರುವಾಗಿದೆ. ಹಾಗಾಗಿ ಮುಂದಿನ ಹಂತಕ್ಕೆ ಇದು ಹೋಗುತ್ತದೆ. ಈ ಸಲ ವಿದೇಶದಿಂದ ಸ್ಪರ್ಧಿಗಳು ಬಂದರೂ ಅಚ್ಚರಿ ಇಲ್ಲ. ಹಿಂದಿ ಬಿಗ್ ಬಾಸ್ ಕಾರ್ಯಕ್ರಮವನ್ನೂ ಕನ್ನಡದ ಬಿಗ್ ಬಾಸ್ ಮೀರಿಸಿದೆ’ ಎಂದು ತುಕಾಲಿ ಸಂತೋಷ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More