ಯಶ್ ಲುಕ್​ನಲ್ಲಿ ಬಂದ ತುಕಾಲಿ ಸಂತೋಷ್; ನಗುವಿನ ಹೊಳೆ

Updated on: Jun 19, 2025 | 11:01 AM

ರಾಕಿಂಗ್ ಸ್ಟಾರ್ ಯಶ್ ಅವರು ಎಲ್ಲ ಕಡೆ ಫೇಮಸ್. ಅವರ ಲುಕ್​ನ ಅನೇಕರು ಕಾಪಿ ಮಾಡಿದ ಉದಾಹರಣೆ ಇದೆ. ಈಗ ಯಶ್ ಅವರ ಲುಕ್​ನ ತುಕಾಲಿ ಸಂತೋಷ್ ಕಾಪಿ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ಸಖತ್ ಫನ್ ಆಗಿತ್ತು. ಆ ಬಗ್ಗೆ ಇಲ್ಲಿದೆ ವಿವರ.

ತುಕಾಲಿ ಸಂತೋಷ್ (Tukali Santosh) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮೂಲಕ ಎಲ್ಲರ ಮೆಚ್ಚುಗೆ ಪಡೆದರು. ಅವರು ಈಗ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಅವರು ‘ಕ್ವಾಟ್ಲೆ ಕಿಚನ್’ ಶೋನಲ್ಲಿ ರಾಕಿಂಗ್ ಸ್ಟಾರ್ ಯಶ್ ಲುಕ್​ನಲ್ಲಿ ಬಂದಿದ್ದಾರೆ. ಇತರ ಸ್ಪರ್ಧಿಗಳು ಕೊಡೋ ಕಾಟಕ್ಕೆ ಅವರು ಬಳಲಿ ಬೆಂಡಾಗಿ ಹೋಗಿದ್ದಾರೆ. ಕೊನೆಗೆ ನಾನು ‘ರಾಕಿಂಗ್ ಸ್ಟಾರ್ ಯಶ್ ಅಲ್ವೇ ಅಲ್ಲ’ ಎಂದು ಅಲವತ್ತುಕೊಂಡಿದ್ದಾರೆ. ಆ ಸಂದರ್ಭದ ಪ್ರೋಮೋ ವೈರಲ್ ಆಗಿದೆ. ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More