‘ತುಕಾಲಿ ಸಂತೋಷ್ ಫೇಕ್’; ಕಿಚ್ಚನ ಎದುರೇ ಹೇಳಿದ ದೊಡ್ಮನೆ ಮಂದಿ

Updated on: Nov 19, 2023 | 8:52 AM

ತುಕಾಲಿ ಸಂತೋಷ್ ಅವರು ವರ್ತೂರು ಸಂತೋಷ್ ಜೊತೆ ಫ್ರೆಂಡ್​ಶಿಪ್ ಬೆಳೆಸಿಕೊಂಡಿದ್ದಾರೆ. ಈಗ ದೊಡ್ಮನೆಯಲ್ಲಿ ಫೇಕ್ ಯಾರು, ರಿಯಲ್ ಯಾರು ಅನ್ನೋದನ್ನು ಹೇಳಬೇಕಿತ್ತು. ಅನೇಕರು ತುಕಾಲಿ ಸಂತೋಷ್ ಅವರ ಹೆಸರನ್ನು ತೆಗೆದುಕೊಂಡರು.

ತುಕಾಲಿ ಸಂತೋಷ್ ಅವರು ಬಿಗ್ ಬಾಸ್​ನಲ್ಲಿ (Bigg Boss) ಆಗಾಗ ಬಣ ಚೇಂಜ್ ಮಾಡುತ್ತಲೇ ಇರುತ್ತಾರೆ. ಈ ಮೊದಲು ಅವರು ವಿನಯ್ ಜೊತೆ ಕಾಣಿಸಿಕೊಳ್ಳುತ್ತಿದ್ದರು. ಅಲ್ಲಿ ತಮಗೆ ಸರಿಯಾದ ಗೌರವ ಸಿಗಲಿಲ್ಲ ಎಂದು ಅವರು ಬಣ ಬದಲಾಯಿಸಿದರು. ಈಗ ಅವರು ವರ್ತೂರು ಸಂತೋಷ್ ಜೊತೆ ಫ್ರೆಂಡ್​ಶಿಪ್ ಬೆಳೆಸಿಕೊಂಡಿದ್ದಾರೆ. ಈಗ ದೊಡ್ಮನೆಯಲ್ಲಿ ಫೇಕ್ ಯಾರು, ರಿಯಲ್ ಯಾರು ಅನ್ನೋದನ್ನು ಹೇಳಬೇಕಿತ್ತು. ಅನೇಕರು ತುಕಾಲಿ ಸಂತೋಷ್ ಅವರ ಹೆಸರನ್ನು ತೆಗೆದುಕೊಂಡರು. ‘ಅವರು ತಂಡಕ್ಕೆ ನಿಯತ್ತಾಗಿ ಇರ್ತೀನಿ ಎಂದು ಹೇಳುತ್ತಾರೆ. ಆದರೆ, ಅದು ಸತ್ಯ ಅಲ್ಲ’ ಎಂದಿದ್ದಾರೆ ಮನೆ ಮಂದಿ. ಇಂದು (ನವೆಂಬರ್ 19) ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ರಾತ್ರಿ 9 ಗಂಟೆಗೆ ಸಂಪೂರ್ಣ ಎಪಿಸೋಡ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More