AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡು ತುಕಾರಾಂ ಸಂಸದರಾದರು: ಪ್ರತಾಪ್ ಸಿಂಹ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡು ತುಕಾರಾಂ ಸಂಸದರಾದರು: ಪ್ರತಾಪ್ ಸಿಂಹ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 08, 2024 | 2:00 PM

Share

ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುವುದೇ ಉತ್ತಮ, ಅವರು ಮುಂದುವರಿದರೆ ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರ ಎಲ್ಲ ಸಂಗತಿಗಳು ಜನಕ್ಕೆ ಗೊತ್ತಾಗುತ್ತವೆ, ಮುಡಾ ಹಗರಣದಲ್ಲಿ ದಲಿತನೊಬ್ಬನಿಗೆ ಸೇರಿದ ಜಮೀನು ಜಾತಿಯಲ್ಲಿ ಕುರುಬರಾಗಿರುವ ಸಿದ್ದರಾಮಯ್ಯನವರಿಗೆ ಹೇಗೆ ಸೇರುತ್ತದೆ ಎಂದು ಪ್ರತಾಙ್ ಸಿಂಹ ಕೇಳಿದರು.

ಬಳ್ಳಾರಿ: ಸಂಡೂರಿನ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹಣಮಂತು ಪರ ಪ್ರಚಾರ ಮಾಡುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ ನಮ್ಮ ವರದಿಗಾರನೊಂದಿಗೆ ಮಾತಾಡಿ ಸಂಡೂರಿಗೆ ಉಪ ಚುನಾವಣೆ ನಡೆಯುವಂತಾಗಿದ್ದೇ ಅಕ್ರಮ, ಇಲ್ಲಿನ ಶಾಸಕರಾಗಿದ್ದ ಈ ತುಕಾರಾಂ ಸಂಸದರಾಗಿ ಅಯ್ಕೆಯಾಗಲು ವಾಲ್ಮೀಕಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡರು, ಕ್ಷೇತ್ರದಿಂದ ವಿಧಾನಸಭೆಗೆ 4 ಬಾರಿ ಚುನಾಯಿತರಾದರೂ ಅಭಿವೃದ್ಧಿ ಕಾರ್ಯಗಳ್ಯಾವೂ ಮಾಡಿಲ್ಲ, ಬಿಜೆಪಿ ಅಭ್ಯರ್ಥಿ ಗೆಲ್ಲೋದು ನಿಶ್ಚಿತ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಯಾರದೋ ಹೆಣ ತಂದು ಹೂತು ನಮ್ಮದು ಎನ್ನುತ್ತಾರೆ: ವಕ್ಫ್ ಆಸ್ತಿ ವಿಚಾರವಾಗಿ ಪ್ರತಾಪ್ ಸಿಂಹ ವಾಗ್ದಾಳಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.