ಜರ್ಮನಿಯಲ್ಲಿ ಕ್ರಿಸ್​ಮಸ್​ ಮಾರ್ಕೆಟ್ ರದ್ದು, ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ ಗಬ್ಬಾರ್ಡ್ ಕಳವಳ

Updated on: Dec 22, 2025 | 7:19 AM

ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್​ ಇಸ್ಲಾಮಿಸ್ಟ್​ ಸಿದ್ಧಾಂತಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಇಸ್ಲಾಮಿಕ್‌ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನು ಜನರು ಒತ್ತಾಯಿಸುತ್ತಿದ್ದಾರೆ. ಅವರು ಇಸ್ಲಾಂ ಅನ್ನು ಅಮೆರಿಕದ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಪ್ರಮುಖ ಬೆದರಿಕೆ ಎಂದು ಕರೆದಿದ್ದಾರೆ. ಅಮೆರಿಕದಲ್ಲಿ ಇಸ್ಲಾಮಿಕ್ ಸಿದ್ಧಾಂತವು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ.

ವಾಷಿಂಗ್ಟನ್, ಡಿಸೆಂಬರ್ 22: ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್​​ ಇಸ್ಲಾಮಿಸ್ಟ್​ ಸಿದ್ಧಾಂತಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಇಸ್ಲಾಮಿಕ್‌ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನು ಜನರು ಒತ್ತಾಯಿಸುತ್ತಿದ್ದಾರೆ. ಅವರು ಇಸ್ಲಾಂ ಅನ್ನು ಅಮೆರಿಕದ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಪ್ರಮುಖ ಬೆದರಿಕೆ ಎಂದು ಕರೆದಿದ್ದಾರೆ. ಅಮೆರಿಕದಲ್ಲಿ ಇಸ್ಲಾಮಿಕ್ ಸಿದ್ಧಾಂತವು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ.

ಈ ಬೆದರಿಕೆ ಇನ್ನು ಮುಂದೆ ವಿದೇಶಗಳಿಗೆ ಸೀಮಿತವಾಗಿಲ್ಲ, ಬದಲಾಗಿ ಅಮೆರಿಕಕ್ಕೂ ಅಪಾಯನ್ನುಂಟುಮಾಡುತ್ತದೆ. ಇದು ಜಾಗತಿಕ ಕ್ಯಾಲಿಫೇಟ್ ಮತ್ತು ಷರಿಯಾ ಆಧಾರಿತ ಆಡಳಿತವನ್ನು ಸ್ಥಾಪಿಸುವ ಗುರಿಯನ್ನು ಹೊಂದಿರುವ ರಾಜಕೀಯ ಕಾರ್ಯಸೂಚಿಯಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಇಸ್ಲಾಮಿಕ್ ಭಯೋತ್ಪಾದಕರ ಗುಂಡಿನ ದಾಳಿಗೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ. ಹೆಚ್ಚಿನ ಸಂಖ್ಯೆಯ ಇಸ್ಲಾಮಿಸ್ಟ್‌ಗಳ ಒಳನುಸುಳುವಿಕೆಯೇ ಆಸ್ಟ್ರೇಲಿಯಾದ ಈ ಪರಿಸ್ಥಿತಿಗೆ ಕಾರಣ. ಆಸ್ಟ್ರೇಲಿಯಾ ಮಾತ್ರವಲ್ಲದೇ ಅಮೆರಿಕ ಸೇರಿದಂತೆ ಇಡೀ ಜಗತ್ತನ್ನ ಇಸ್ಲಾಮಿಕರಣಗೊಳಿಸುವುದು ಅವರ ಗುರಿಯಾಗಿದೆ. ಇಸ್ಲಾಮಿಸ್ಟ್‌ಗಳು ಮತ್ತು ಇಸ್ಲಾಮಿಸಂ ಅಮೆರಿಕಕ್ಕೆ ಮಾತ್ರವಲ್ಲದೇ ಇಡೀ ವಿಶ್ವದ ಸ್ವಾತಂತ್ರ್ಯ, ಭದ್ರತೆ, ಸಮೃದ್ಧಿಗೆ ದೊಡ್ಡ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಈ ಸಿದ್ಧಾಂತವನ್ನು ಗುರುತಿಸಿ ಸಕಾಲಿಕವಾಗಿ ಅದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಯುರೋಪ್ ಮತ್ತು ಆಸ್ಟ್ರೇಲಿಯಾದಂತಹ ಪರಿಸ್ಥಿತಿಯನ್ನು ದೇಶ ಎದುರಿಸಬೇಕಾಗುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ. ಅಮೆರಿಕದ ಅನೇಕ ನಗರಗಳಲ್ಲಿ, ಮೂಲಭೂತವಾದಿ ಇಸ್ಲಾಮಿಕ್ ಧರ್ಮಗುರುಗಳು ಯುವಕರನ್ನು ಬಹಿರಂಗವಾಗಿ ಉಗ್ರವಾದದತ್ತ ಪ್ರಚೋದಿಸುತ್ತಿದ್ದಾರೆ .

ಅದೃಷ್ಟವಶಾತ್‌ ಟ್ರಂಪ್‌ ಅವರು ನಮ್ಮ ಗಡಿಗಳ ಭದ್ರತೆಗೆ ಆದ್ಯತೆ ನೀಡಿದ್ದಾರೆ. ಇದರೊಂದಿಗೆ ಶಂಕಿತ ಭಯೋತ್ಪಾದಕರನ್ನ ಗಡೀಪಾರು ಮಾಡುವುದು ಮತ್ತು ಅಮೆರಿಕನ್ನರನ್ನ ಅಪಾಯಕ್ಕೆ ತಳ್ಳುವ ಸಾಮೂಹಿಕ ವಲಸೆಯನ್ನ ತಪ್ಪಿಸುವುದು ಅಗತ್ಯವಾಗಿದೆ ಎಂದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ