Tumakuru Accident: ಗೋಡೆಕೆರೆ ಗೇಟ್ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ವೋಕ್ಸ್‌ವ್ಯಾಗನ್ ಮತ್ತು ಕಿಯಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಜಾಗರೂಕ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಮೃತರ ಕುಟುಂಬಗಳಿಗೆ ತೀವ್ರ ಆಘಾತ ಉಂಟಾಗಿದೆ.
ತುಮಕೂರು, ಆಗಸ್ಟ್ 30: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದ ತನಿಖೆ ಚುರುಕುಗೊಂಡಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ವೋಕ್ಸ್‌ವ್ಯಾಗನ್ ಮತ್ತು ಕಿಯಾ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಿಯಾ ಕಾರಿನಲ್ಲಿದ್ದ ದಾವೂದ್ ಪಾಷಾ ಹಾಗೂ ಅವರ ಇಬ್ಬರು ಪುತ್ರಿಯರಾದ ಆನಮ್ (3 ವರ್ಷ), ಸೀಮಾ (6 ವರ್ಷ) ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ವಿವೇಕ್ ಮತ್ತು ಅನಿಲ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಕ ವಿವೇಕ್ ಅವರ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ಗಾಯಗೊಂಡ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕ್ಕನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
