ವೇಗವಾಗಿ ಹೋಗುತ್ತಿದ್ದ ಕ್ಯಾಂಟರ್ ಟೈರ್ ಸ್ಫೋಟ! ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ

Edited By:

Updated on: Apr 14, 2026 | 2:05 PM

ತುಮಕೂರು, ಏಪ್ರಿಲ್ 14ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ದ್ವಾರಾಳು ಸೇತುವೆ ಬಳಿ ವೇಗದ ಕ್ಯಾಂಟರ್ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿತು. ಹಿಂಬಾಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಮುಂಭಾಗ ಜಖಂಗೊಂಡಿದ್ದು, ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವರೆಕೆರೆ ಪೊಲೀಸರು ಪರಿಶೀಲಿಸಿದ್ದು, ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

ತುಮಕೂರು, ಏ.14: ಇಂದು (ಮಂಗಳವಾರ) ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಕ್ಯಾಂಟರ್ ವಾಹನ ವೇಗವಾಗಿ ಚಲಿಸುತ್ತಿದ್ದಾಗ ದ್ವಾರಾಳು ಬ್ರಿಡ್ಜ್ ಸಮೀಪ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಕ್ಯಾಂಟರ್‌ನ ಹಿಂದೆಯೇ ಬರುತ್ತಿದ್ದ ಸರ್ಕಾರಿ ಬಸ್‌ಗೆ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ತಕ್ಷಣ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More