ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ: ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

Edited By:

Updated on: May 14, 2026 | 4:44 PM

ವಿಧಾನಸಭೆ ಚುನಾವಣೆಯ ಸೋಲು ಹಾಗೂ ಲೋಕಸಭೆ ಚುನಾವಣೆಯ ವೇಳೆ ನಡೆದ ವಿದ್ಯಮಾನಗಳ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ (JC Madhuswamy) ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಹೌದು....2023ರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸೋತ ಬಳಿಕ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದು, ಮಾಧುಸ್ವಾಮಿ ಇದೀಗ ಏಕಾಏಕಿ ಪ್ರತ್ಯಕ್ಷರಾಗಿ ಸ್ವಪಕ್ಷದ ನಾಯಕರ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರು, (ಮೇ 14): ವಿಧಾನಸಭೆ ಚುನಾವಣೆಯ ಸೋಲು ಹಾಗೂ ಲೋಕಸಭೆ ಚುನಾವಣೆಯ ವೇಳೆ ನಡೆದ ವಿದ್ಯಮಾನಗಳ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ (JC Madhuswamy) ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಹೌದು….2023ರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸೋತ ಬಳಿಕ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದು, ಮಾಧುಸ್ವಾಮಿ ಇದೀಗ ಏಕಾಏಕಿ ಪ್ರತ್ಯಕ್ಷರಾಗಿ ಸ್ವಪಕ್ಷದ ನಾಯಕರ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಬಿಜೆಪಿಯಿಂದ ದೂರ ಇದ್ದೀರಾ ಎಂಬ ಪ್ರಶ್ನೆಗೆ ಮಾಧ್ಯಮದವರ ಪ್ರಶ್ನಿಗೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ, ಜನ ನನ್ನನ್ನ ಪಬ್ಲಿಕ್ ನಲ್ಲಿ ಇರಲು ಇಷ್ಟಪಟ್ಟಿಲ್ಲ. ಅದಕ್ಕೆ ಸೋಲಿಸಿದ್ದಾರೆ. ಅದಕ್ಕೆ ನಾನು ದೂರ ಇದ್ದೇನೆ. ಆದರೆ ಕಾರ್ಯಕರ್ತರ ಜೊತೆ ನಾನಿದ್ದೇನೆ. ನಾನು ಈ ಜಿಲ್ಲೆಯಲ್ಲಿ ಸಂಘ-ಸಂಸ್ಥೆ ಚುನಾವಣೆ, ಕಾರ್ಯಕರ್ತರ ಚುನಾವಣೆ ಮಾಡುತ್ತಿರೋ ಏಕೈಕ ಪರಾಜಿತ ಅಭ್ಯರ್ಥಿ. ಚುನಾವಣೆ ಸೋತಿರಬಹುದು. ಆದ್ರೆ, ಕಾರ್ಯಕರ್ತರು ಜೊತೆ ಚೆನ್ನಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಗೈರು ಆಗಿರುವ ಬಗ್ಗೆ ಮಾತನಾಡಿದ ಅವರು, ಕರೆಯದೇ ಇರುವ ಕಾರ್ಯಕ್ರಮಗಳಿಗೆ ನಾನು ಹೆಂಗಪ್ಪ ಬರಲಿ ಎಂದು ಸ್ವಪಕ್ಷದ ನಾಯಕರ ನಡೆಗೆ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More