ತುಮಕೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

Edited By:

Updated on: Apr 21, 2026 | 12:56 PM

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ಹೊಸದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಐದಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ವಿಡಿಯೋ ಇಲ್ಲಿದೆ.

ತುಮಕೂರು, ಏಪ್ರಿಲ್ 21: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಬಸ್‌ನಲ್ಲಿ ಪ್ರಯಾಣಿಕರು ಭರ್ತಿಯಾಗಿದ್ದರು. ಗುಬ್ಬಿ ಸಮೀಪದ ಕಳ್ಳಿಪಾಳ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಐದಾರು ಜನರಿಗೆ ಗಂಭೀರ ಗಾಯ

ಅಪಘಾತದಲ್ಲಿ ಐದಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 40ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More