ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ!

Updated on: Jan 06, 2026 | 8:49 AM

ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು, ಜನವರಿ 06: ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.