ತುಮಕೂರು ದಸರಾ: ಮಕ್ಕಳ ಸಂಭ್ರಮಕ್ಕೆ ಅಧಿಕಾರಿಗಳ ಹೆಜ್ಜೆ: ಡಿಸಿ ಶುಭಾ ಕಲ್ಯಾಣ್ ಪುತ್ರಿಯೊಂದಿಗೆ ರ್ಯಾಂಪ್ ವಾಕ್

Edited By:

Updated on: Oct 16, 2026 | 5:17 PM

ತುಮಕೂರು ದಸರಾ ಮಹೋತ್ಸವದಲ್ಲಿ ಮಕ್ಕಳ ದಸರಾ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಮಕ್ಕಳಲ್ಲಿ ಹಬ್ಬದ ಅರಿವು ಮೂಡಿಸುವ ಉದ್ದೇಶದಿಂದ ನಡೆದ ತಾಯಿ-ಮಕ್ಕಳ ಫ್ಯಾಷನ್ ಶೋನಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಸಿಇಒ ಅಶ್ವಿಜಾ ಮತ್ತು ತಹಸೀಲ್ದಾರ್ ರಾಜೇಶ್ವರಿ ತಮ್ಮ ಮಕ್ಕಳೊಂದಿಗೆ ರ್ಯಾಂಪ್ ವಾಕ್ ಮಾಡಿ ಎಲ್ಲರ ಗಮನ ಸೆಳೆದರು. ಈ ವಿನೂತನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ತುಮಕೂರು, ಅ.16: ಜಿಲ್ಲೆಯ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳಲ್ಲಿ ದಸರಾ ಹಬ್ಬದ ಮಹತ್ವ ಹಾಗೂ ಸಂಪ್ರದಾಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿತ್ತು. ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಮಕ್ಕಳ ದಸರಾದಲ್ಲಿ ಪುಟಾಣಿಗಳಿಗಾಗಿ ವಿವಿಧ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ತಾಯಿ ಮತ್ತು ಮಕ್ಕಳ ಫ್ಯಾಷನ್ ಶೋ ನಡೆಯಿತು. ಈ ಫ್ಯಾಷನ್ ಶೋನಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ತಮ್ಮ ಪುತ್ರಿಯೊಂದಿಗೆ, ಜಿಲ್ಲಾ ಪಂಚಾಯತ್ ಸಿಇಒ ಅಶ್ವಿಜಾ ಮತ್ತು ತಹಸೀಲ್ದಾರ್ ರಾಜೇಶ್ವರಿ ಅವರು ತಮ್ಮ ಮಕ್ಕಳೊಂದಿಗೆ ರ್ಯಾಂಪ್ ವಾಕ್ ಮಾಡಿ ಎಲ್ಲರ ಗಮನ ಸೆಳೆದರು. ಅಧಿಕಾರಿಗಳು ತಮ್ಮ ಕಾರ್ಯದ ಒತ್ತಡದ ನಡುವೆಯೂ ಮಕ್ಕಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜನರ ಮೆಚ್ಚುಗೆಗೆ ಪಾತ್ರವಾಯಿತು. ವಿಶೇಷ ಚೇತನ ಮಕ್ಕಳಿಂದಲೂ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಮೂಲಕ ಮಕ್ಕಳ ದಸರಾ ಯಶಸ್ವಿಯಾಗಿ ಪೂರ್ಣಗೊಂಡಿತು ಎಂದು ಹೇಳಬಹುದು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 16, 2026 05:15 PM
Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More