ಸಿದ್ದರಾಮಯ್ಯ ಕಾರ್ಯಕ್ರಮದ ತಯಾರಿ ನೋಡಿ ಬರುವಷ್ಟರಲ್ಲಿ ಕಳ್ಳರ ಕೈ ಚಳಕ: ಲಕ್ಷಾಂತರ ರೂ ಚಿನ್ನಾಭರಣ ಕಳ್ಳತನ
ಪಾವಗಡದಲ್ಲಿ ಕಾಂಗ್ರೆಸ್ ಮುಖಂಡ ಅನಿಲ್ ಅವರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿದೆ. ಇದೇ ತಿಂಗಳ 21 ರಂದು ಪಾವಗಡಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಅನಿಲ್ ಅವರು ತೆರಳಿದ್ದರು. ಆ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ.
ತುಮಕೂರು, ಜುಲೈ 18: ಸಿಎಂ ಸಿದ್ದರಾಮಯ್ಯ (Siddaramaiah) ಕಾರ್ಯಕ್ರಮದ ತಯಾರಿ ನೋಡಲು ಹೊದ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ದರೋಡೆ ನಡೆದಿರುವಂತಹ ಘಟನೆ ಗುರುವಾರದಂದು ಪಾವಗಡ ಪಟ್ಟಣದ ಶ್ರೀನಿವಾಸ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಅನಿಲ್ ಮನೆಯಲ್ಲಿ ಕಳ್ಳತನ ನಡೆದಿದೆ. ಈ ತಿಂಗಳು 21ರಂದು ಸಿಎಂ ಸಿದ್ಧರಾಮಯ್ಯ ಪಾವಗಡಕ್ಕೆ ಆಗಮಿಸಲಿದ್ದಾರೆ. ಈ ಹಿನ್ನಲೆ ಪಾವಗಡದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತಾ ತಯಾರಿ ನೋಡುವುದಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 18, 2025 11:19 AM