ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ತಾಳಿ ಕಟ್ಟುವ ಶುಭ ವೇಳೆ ನಡೆದಿದ್ದೇನು?

Edited By:

Updated on: Feb 08, 2026 | 3:44 PM

ತುಮಕೂರಿನ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ಹರಿಪ್ರಸಾದ್ ತನ್ನ ಎರಡನೇ ವಿವಾಹಕ್ಕೆ ಸಿದ್ಧನಾಗಿದ್ದಾಗ, ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿ ವಿವಾಹವನ್ನು ತಡೆದಿದ್ದಾರೆ. ವಿಚ್ಛೇದನ ಪಡೆಯದೆ ಎರಡನೇ ಮದುವೆಯಾಗುವುದು ಕಾನೂನುಬಾಹಿರವಾಗಿದ್ದು, ಈ ಘಟನೆಗೆ ಕಲ್ಯಾಣ ಮಂಟಪದಲ್ಲಿ ಹೈಡ್ರಾಮಾ ಸೃಷ್ಟಿಯಾಗಿದೆ. ಪೊಲೀಸರು ಹರಿಪ್ರಸಾದ್‌ನನ್ನು ವಶಕ್ಕೆ ಪಡೆದಿದ್ದಾರೆ.

ತುಮಕೂರು, ಫೆಬ್ರವರಿ 08: ನಗರದ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ವಿವಾಹವೊಂದನ್ನು ಮೊದಲ ಪತ್ನಿ ತಡೆದು ನಿಲ್ಲಿಸಿರುವಂತಹ ಘಟನೆ ನಡೆದಿದೆ. ಆ ಮೂಲಕ  ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲನೇ ಪತ್ನಿ ಶಾಕ್ ನೀಡಿದ್ದಾರೆ. ಹರಿಪ್ರಸಾದ್ ಎಂಬುವರು ವಿಚ್ಛೇದನ ನೀಡದೇ ಎರಡನೇ ಮದುವೆಗೆ ಮುಂದಾಗಿದ್ದರು. ಅವರ ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಮದುವೆ ಮಂಟಪಕ್ಕೆ ಆಗಮಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More