AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ ಪಾವತಿಸಲು ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಹೆಚ್​ಒ ಕಚೇರಿ ಲೆಕ್ಕಪತ್ರ ವ್ಯವಸ್ಥಾಪಕ

ಬಿಲ್ ಪಾವತಿಸಲು ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಡಿಹೆಚ್​ಒ ಕಚೇರಿ ಲೆಕ್ಕಪತ್ರ ವ್ಯವಸ್ಥಾಪಕ

Jagadisha B
| Edited By: |

Updated on:Mar 25, 2026 | 9:18 PM

Share

ತುಮಕೂರು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಬಯಲಾಗಿದೆ. ಲೋಕಾಯುಕ್ತ ಪೊಲೀಸರು ಎನ್​ಜಿಒನಿಂದ ಆರೋಗ್ಯ ಜಾಗೃತಿ ಕಾರ್ಯಕ್ರಮದ ಬಿಲ್ ಪಾವತಿಸಲು 12,000 ರೂ. ಲಂಚ ಸ್ವೀಕರಿಸುತ್ತಿದ್ದ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಡೆದ ಕಾರ್ಯಕ್ರಮದ ಬಿಲ್ ಬಿಡುಗಡೆಗೆ ಅರವಿಂದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ತುಮಕೂರು, ಮಾ.25: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರದ ಬಣ್ಣ ಬಯಲಾಗಿದೆ. ಆರೋಗ್ಯ ಜಾಗೃತಿ ಕಾರ್ಯಕ್ರಮದ ಬಿಲ್ ಪಾವತಿಸಲು ಎನ್​ಜಿಒ ಅಧ್ಯಕ್ಷರಿಂದ ಲಂಚ ಸ್ವೀಕರಿಸುತ್ತಿದ್ದ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 2025-26ರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಜಿಲ್ಲೆಯ 10 ತಾಲೂಕುಗಳ ಜಾತ್ರೆ ಮತ್ತು ಸಂತೆಗಳಲ್ಲಿ ಆರೋಗ್ಯ ಜಾಗೃತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಜಿಲ್ಲೆಯ ಹತ್ತು ತಾಲ್ಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಕುರಿತ ವಸ್ತು ಪ್ರದರ್ಶನ ಮಾಡಲಾಗಿತ್ತು. ಈ ಕಾರ್ಯಕ್ರಮ ನಡೆಸಿದ್ದ ಎನ್​ಜಿಒಗೆ ಬರಬೇಕಿದ್ದ 1.98 ಲಕ್ಷ ರೂ. ಬಿಲ್ ಪಾವತಿಸಲು ಅರವಿಂದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಿಲ್ ಬಿಡುಗಡೆ ಮಾಡಲು ಅರವಿಂದ್ 12 ಸಾವಿರ ರೂ. ಲಂಚ ಕೇಳಿದ್ದರು. ಎನ್​ಜಿಒ ಅಧ್ಯಕ್ಷ ರಾಜಶೇಖರ್ ಅವರು ಲಂಚ ನೀಡಲು ನಿರಾಕರಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಇಂದು ಸಂಜೆ 4:10ಕ್ಕೆ ಕಚೇರಿ ಕಾಂಪೌಂಡ್ ಒಳಗೆ ರಾಜಶೇಖರ್ ಅವರಿಂದ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅರವಿಂದ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Mar 25, 2026 09:14 PM
Follow Us