ಕ್ರಿಕೆಟ್ ಪ್ರೇಮಿಗಳಿಗೆ ಗುಡ್​ ನ್ಯೂಸ್​: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಕ್ರಿಕೆಟ್ ಪ್ರೇಮಿಗಳಿಗೆ ಗುಡ್​ ನ್ಯೂಸ್​: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 02, 2024 | 2:49 PM

ತುಮಕೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ. 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದೆ. ಈ ಯೋಜನೆಯು ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಮತ್ತು ಕ್ರೀಡಾ ಉತ್ಸಾಹಕ್ಕೆ ಪೂರಕವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ತುಮಕೂರು, ಡಿಸೆಂಬರ್​ 02: ನಗರದಲ್ಲಿ ನಿರ್ಮಾಣಗೊಳ್ಳಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಪೂರಕವಾಗಲಿದೆ ಎಂದು ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸುವಂತೆ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದಿದ್ದಾರೆ. ಒಟ್ಟು 1,250 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.