ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ರಮೇಶ್ ಬಿ. ಜವಳಗೇರಾ
|

Updated on: Jan 08, 2025 | 9:38 PM

ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ರಾಸಲೀಲೆ ನಡೆಸಿದ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರನ ಬಗ್ಗೆ ಸಂತ್ರಸ್ತೆ ಮಹಿಳೆ ಹೇಳಿದ್ದೇನು ಎನ್ನುವುದನ್ನು ಕೇಳಿ.

ತುಮಕೂರು, (ಜನವರಿ 08): ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ದೂರು ನೀಡಲು ಬಂದಾಕೆಗೆ ಡಿವೈಎಸ್​ಪಿ ಏನೆಲ್ಲಾ ಮಾಡಿದ ಎನ್ನುವುದನ್ನು ಖುದ್ದು ಮಹಿಳೆ ವಿವರಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ