ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ

Updated on: Oct 13, 2026 | 3:58 PM

ತುಮಕೂರು ದಸರಾ ಸಂಭ್ರಮದಲ್ಲಿ ಮಕ್ಕಳ ಸಾಂಸ್ಕೃತಿಕ ಪ್ರತಿಭೆಗೆ ಅದ್ಭುತ ವೇದಿಕೆ ಕಲ್ಪಿಸಲಾಗಿದೆ. ಯುವ ದಸರಾ ಮೂಲಕ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಪುಟಾಣಿಗಳು ನೃತ್ಯ, ನಾಟಕ, ಜಾನಪದ ಸೇರಿದಂತೆ ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನಸೂರೆಗೊಂಡಿದ್ದಾರೆ. ಓದಿನ ನಡುವೆ ಬದಿಗಿಟ್ಟಿದ್ದ ತಮ್ಮ ಕಲಾಪ್ರತಿಭೆಗಳನ್ನು ಅನಾವರಣಗೊಳಿಸಲು ಜಿಲ್ಲಾಡಳಿತ ಅವಕಾಶ ನೀಡಿದೆ. ಈ ಕಾರ್ಯಕ್ರಮ ಮಕ್ಕಳಲ್ಲಿ ಸಂತಸ ತಂದಿದೆ.

ತುಮಕೂರು ದಸರಾ ಸಂಭ್ರಮಕ್ಕೆ ಮಕ್ಕಳ ಸಾಂಸ್ಕೃತಿಕ ಪ್ರತಿಭೆ ಹೊಸ ಮೆರುಗು ನೀಡಿದೆ. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾದಲ್ಲಿ ಜಿಲ್ಲೆಯ ಹತ್ತು ತಾಲೂಕುಗಳ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಸುಮಾರು ನಾಲ್ಕು ಸಾವಿರ ಪುಟಾಣಿ ಮಕ್ಕಳು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ನೃತ್ಯ, ನಾಟಕ, ಭರತನಾಟ್ಯ, ವೀರಗಾಸೆ, ಸಪ್ತಮಾತೃಕೆ ಹಾಗೂ ಅಷ್ಟಲಕ್ಷ್ಮಿ ನೃತ್ಯ ರೂಪಕಗಳಂತಹ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡಿವೆ. ಕಳೆದ ಎರಡು ವರ್ಷಗಳಿಂದಲೂ ಮಕ್ಕಳಿಗಾಗಿ ವೇದಿಕೆ ನಿರ್ಮಿಸಲಾಗಿದ್ದು, ಇದು ಮೂರನೇ ವರ್ಷದ ಯುವ ದಸರಾ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ನೇತೃತ್ವದಲ್ಲಿ ಜಿಲ್ಲಾಡಳಿತವು ಮಕ್ಕಳ ಕಲಾಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿದ್ದು, ಮಕ್ಕಳಲ್ಲಿ ಹೊಸ ಹುರುಪು ಮೂಡಿಸಿದೆ.

 

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More