ನೋಡ ನೋಡುತ್ತಿದ್ದಂತೆ ಉರುಳಿದ ಲೈಟಿಂಗ್ ಟ್ರೆಸ್: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್
ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಉರುಳಿ ಬಿದ್ದಿದೆ. ಮೂವರಿಗೆ ಗಾಯವಾಗಿದೆ, ನಾವೆಲ್ಲರೂ ಬಚಾವ್ ಆಗಿದ್ದೇವೆ. ಜಮೀನಿನಲ್ಲಿ ಆಯೋಜಿಸಿದ್ದಕ್ಕೆ ಇಂತಹ ಅವಘಡ ಸಂಭವಿಸಿದೆ. ಸ್ವಲ್ಪ ಆಯತಪ್ಪಿದ್ರೂ ವೇದಿಕೆಯಲಿದ್ದ ಗಣ್ಯರ ಪ್ರಾಣ ಹೋಗ್ತಿತ್ತು.
ಬೆಳಗಾವಿ: ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತಿದ್ದಾಗಲೇ ಲೈಟಿಂಗ್ ಟ್ರೆಸ್ ಮುರಿದು ಬಿದಿದ್ದು, ವೇದಿಕೆಯ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅದೃಷ್ಠವಷಾತ್ ಅವಘಡದಿಂದ ಪಾರಾಗಿರುವಂತಹ ಘಟನೆ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 20 ಗಣ್ಯರು ಕುಳಿತಿದ್ದ ವೇದಿಕೆಯ ಮೇಲೆಯೇ ನೋಡ ನೋಡುತ್ತಿದ್ದಂತೆ ಲೈಟಿಂಗ್ ಟ್ರೆಸ್ ಉರುಳಿದೆ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಲಗಿಯಲ್ಲಿ ಟಿವಿ 9ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿಕೆ ನೀಡಿದ್ದಾರೆ. ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಉರುಳಿ ಬಿದ್ದಿದೆ. ಮೂವರಿಗೆ ಗಾಯವಾಗಿದೆ, ನಾವೆಲ್ಲರೂ ಬಚಾವ್ ಆಗಿದ್ದೇವೆ. ಜಮೀನಿನಲ್ಲಿ ಆಯೋಜಿಸಿದ್ದಕ್ಕೆ ಇಂತಹ ಅವಘಡ ಸಂಭವಿಸಿದೆ. ಸ್ವಲ್ಪ ಆಯತಪ್ಪಿದ್ರೂ ವೇದಿಕೆಯಲಿದ್ದ ಗಣ್ಯರ ಪ್ರಾಣ ಹೋಗ್ತಿತ್ತು. ವಿದ್ಯುತ್ ಅವಘಡ ಕೂಡ ಸಂಭವಿಸುವ ಸಾಧ್ಯತೆ ಇತ್ತು. ದೇವಿಯ ಆಶೀರ್ವಾದದಿಂದ ನಾವೆಲ್ಲರೂ ಪಾರಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನಷ್ಟ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.