ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶ; 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿ

ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: May 03, 2024 | 9:17 PM

ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ (Ankasandra) ಗ್ರಾಮದಲ್ಲಿ ನಡೆದಿದೆ. ಈ ವೇಳೆ 1 ಲಕ್ಷ ಕೊಬ್ಬರಿ ಸೇರಿ 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರು, ಮೇ.03: ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ(Ankasandra) ಗ್ರಾಮದ ಪಾಪಣ್ಣ ಎಂಬುವರಿಗೆ ಸೇರಿದ ಶೆಡ್​ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾಗಿದೆ. ಆಕಸ್ಮಿಕ ಬೆಂಕಿ ತಗುಲಿ 1 ಲಕ್ಷ ಕೊಬ್ಬರಿ, 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...