AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುವ ಬಸ್ ಕಿಟಕಿಯಲ್ಲಿ ಬ್ಯಾಗ್ ಇಡಲು ಹೋಗಿ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಕಾಲು: ಸೆರೆಯಾಯ್ತು ಭೀಕರ ದೃಶ್ಯ

ಚಲಿಸುವ ಬಸ್ ಕಿಟಕಿಯಲ್ಲಿ ಬ್ಯಾಗ್ ಇಡಲು ಹೋಗಿ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಕಾಲು: ಸೆರೆಯಾಯ್ತು ಭೀಕರ ದೃಶ್ಯ

Jagadisha B
| Edited By: |

Updated on: Mar 25, 2026 | 8:26 PM

Share

ತುಮಕೂರು ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಸೀಟ್ ಹಿಡಿಯುವ ಅತಿ ಆತುರದಲ್ಲಿ ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಬಸ್ ಚಲಿಸುತ್ತಿರುವಾಗಲೇ ಕಿಟಕಿಯ ಮೂಲಕ ಸೀಟ್ ಕಾಯ್ದಿರಿಸಲು ಹೋಗಿ ಬಸ್‌ನ ಹಿಂದಿನ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾಳೆ. ಈ ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತುಮಕೂರು, ಮಾ.25: ನಗರದ ದೇವರಾಜ ಅರಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಅತಿ ಆತುರದ ನಿರ್ಧಾರವೊಂದು ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಬಸ್ ಪ್ಲಾಟ್‌ಫಾರ್ಮ್‌ಗೆ ಬರುವ ಮೊದಲೇ ಕಿಟಕಿಯ ಮೂಲಕ ಸೀಟ್ ಹಿಡಿಯಲು ಹೋದ ವಿದ್ಯಾರ್ಥಿನಿ, ಬಸ್‌ನ ಹಿಂದಿನ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾರೆ. ತುಮಕೂರು-ಪಾವಗಡ ಮಾರ್ಗದ ಬಸ್ ಹತ್ತಲು ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಏಕಾಏಕಿ ಮುಗಿಬಿದ್ದಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಬಸ್ ನಿಲ್ಲುವ ಮೊದಲೇ ಕಿಟಕಿಯ ಒಳಗೆ ಬ್ಯಾಗ್ ಇಟ್ಟು ಸೀಟ್ ಕಾಯ್ದಿರಿಸಲು ಪ್ರಯತ್ನಿಸಿದ್ದಾಳೆ. ಚಲಿಸುತ್ತಿದ್ದ ಬಸ್‌ನ ವೇಗಕ್ಕೆ ವಿದ್ಯಾರ್ಥಿನಿಯ ನಿಯಂತ್ರಣ ತಪ್ಪಿ, ಆಕೆಯ ಕಾಲು ಬಸ್‌ನ ಹಿಂದಿನ ಚಕ್ರದಡಿಗೆ ಸಿಲುಕಿದೆ. ಇದರಿಂದ ಆಕೆಯ ಕಾಲು ಸಂಪೂರ್ಣವಾಗಿ ಜಖಂಗೊಂಡಿದೆ. ಈ ಆಘಾತಕಾರಿ ದೃಶ್ಯವು ಬಸ್ ನಿಲ್ದಾಣದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ತುಮಕೂರು ನಗರ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us