Tumakuru News: ರಸ್ತೆಯಲ್ಲಿ ಗುಂಡಿಗಳ ಹವಾ; ಹಳ್ಳಕ್ಕೆ ಬಿದ್ದ ಖಾಸಗಿ ಬಸ್
ರಸ್ತೆಯಲ್ಲಿನ ಹೊಂಡ ಗುಂಡಿಗಳಿಂದಾಗ ಖಾಸಗಿ ಬಸ್ವೊಂದು ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು: ರಸ್ತೆ ಗುಂಡಿಗಳಿಂದಾಗಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ವಿರೂಪಸಮುದ್ರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಅದೃಷ್ಟವಾಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಾವಗಡ ತಾಲೂಕಿನ ಹಲವು ಹಳ್ಳಿಗಳಿಂದ ಕಂಪನಿಗೆ ಕಾರ್ಮಿಕರು ಹೋಗಿ ಬರ್ತಿದ್ದ ಬಸ್, ರಸ್ತೆ ತಿರುವಿನಲ್ಲಿದ್ದ ಹೊಂಡಗುಂಡಿಗಳಿಂದಾಗಿ ನಿಯಂತ್ರಣ ಕಳೆದುಕೊಂಡು ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: Ashika Ranganath: ಕುಡಿದು ಕಿರಿಕ್ ಮಾಡಿಕೊಂಡ್ರಾ ಆಶಿಕಾ ರಂಗನಾಥ್? ವಿಡಿಯೋ ವೈರಲ್
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 18, 2022 12:13 PM