ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 114ನೇ ವರ್ಷದ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲಾಯ್ತು. ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಮಠ, ಗದ್ದುಗೆ ಪೂಜೆ, ಮಕ್ಕಳ ನಾಮಕರಣದ ಮೂಲಕ ಜನ್ಮದಿನ ಕಾರ್ಯಕ್ರಮ ನೆರವೇರಿತ್ತು. ಬೆಳಗ್ಗೆಯಿಂದ ಭಕ್ತರು ಮಠಕ್ಕೆ ಆಗಮಿಸಿ ಗದ್ದುಗೆ ದರ್ಶನ ಪಡೆದರು.