AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ಜಗದೀಶ ಬಿ.
| Edited By: |

Updated on: Sep 30, 2026 | 1:28 PM

Share

ತುಮಕೂರಿನಲ್ಲಿ ಸುರಿದ ಭಾರೀ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಕೆರೆಯಂತಾಗಿ ಜಲಾವೃತಗೊಂಡಿದ್ದು, ಶಾಲಾ ಆವರಣಗಳಲ್ಲೂ ನೀರು ನಿಂತಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆಸ್ತಿಪಾಸ್ತಿಗಳಿಗೂ ಹಾನಿಯಾಗಿದೆ. ಮಳೆರಾಯನ ಅಬ್ಬರಕ್ಕೆ ನಗರದಾದ್ಯಂತ ಹಲವೆಡೆ ನೀರು ತುಂಬಿಕೊಂಡಿದೆ. ಮಳೆ ನೀರು ಬಸ್ ನಿಲ್ದಾಣದೊಳಗೆ ನುಗ್ಗಿದ್ದರಿಂದ ಬಸ್​ಗಳ ಸಂಚಾರ ಮತ್ತು ಪ್ರಯಾಣಿಕರ ಓಡಾಟಕ್ಕೆ ಅಡಚಣೆಯಾಗಿದೆ.

ತುಮಕೂರು, ಸೆಪ್ಟೆಂಬರ್ 30: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದಲ್ಲಿ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ಮುಂಗಾರು ಮಳೆಯ ಅಬ್ಬರಕ್ಕೆ ತುಮಕೂರು ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್ ನಿಲ್ದಾಣವು ಒಂದು ದೊಡ್ಡ ಕೆರೆಯಂತೆ ಗೋಚರಿಸುತ್ತಿದೆ. ಮಳೆ ನೀರು ಬಸ್ ನಿಲ್ದಾಣದೊಳಗೆ ನುಗ್ಗಿದ್ದರಿಂದ ಬಸ್​ಗಳ ಸಂಚಾರ ಮತ್ತು ಪ್ರಯಾಣಿಕರ ಓಡಾಟಕ್ಕೆ ಅಡಚಣೆಯಾಗಿದೆ.

ಇದಲ್ಲದೆ, ನಗರದ ಹಲವಾರು ಶಾಲಾ ಆವರಣಗಳು ಕೂಡ ಮಳೆ ನೀರಿನಿಂದ ಜಲಾವೃತಗೊಂಡಿವೆ. ಮಳೆಯಿಂದಾಗಿ ರಸ್ತೆಗಳು, ಸಾರ್ವಜನಿಕ ಸ್ಥಳಗಳು ಮತ್ತು ಕೆಳಮಟ್ಟದ ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದ್ದು, ಇಂತಹ ಪರಿಸ್ಥಿತಿಯು ಮುಂದುವರೆಯುವ ಸಾಧ್ಯತೆಯಿದೆ. ಭಾರೀ ಮಳೆಯು ನಗರದಾದ್ಯಂತ ವಿದ್ಯುತ್ ವ್ಯತ್ಯಯ ಮತ್ತು ಸಂಚಾರ ಅಡೆತಡೆಗಳಿಗೂ ಕಾರಣವಾಗಿದೆ. ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More