ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ ವ್ಯವಸ್ಥೆ

ಮಹೇಶ್ ಇ, ಭೂಮನಹಳ್ಳಿ Edited By: ಸಾಧು ಶ್ರೀನಾಥ್​

Updated on: Aug 25, 2023 | 9:21 AM

Goravanahalli Maha Lakshmi Temple: ರಾಜ್ಯದ ಇತರೆ ಕಡೆಗಳಲ್ಲೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ವರಮಹಾಲಕ್ಷ್ಮಿ ಹಬ್ಬ/ವ್ರತವನ್ನು ಶ್ರಾವಣ‌ ಮಾಸದ ಎರಡನೇ ಶುಕ್ರವಾರವಾದ ಇಂದು ಆಚರಿಸಲಾಗುತ್ತದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರದಲ್ಲೂ ಸರತಿ ಸಾಲಿನಲ್ಲಿ ನಿಂತು ಭಕ್ತರು (Devotees) ಶ್ರೀ ಮಹಾಲಕ್ಷ್ಮಿ ದೇವಿಯ ದರ್ಶನ/ ಆಶಿರ್ವಾದ ಪಡೆಯುತ್ತಿದ್ದಾರೆ. ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.

ತುಮಕೂರು, ಆಗಸ್ಟ್​ 25: ಇಂದು ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬ ಬಲು ಜೋರಾಗಿದೆ ನಡೆದಿದೆ. ಕೊರೊನಾ ಕಾಟದ ನಂತರ ಈ ಬಾರಿ ಹಬ್ಬಗಳಿಗೆ ಕಳೆಕಟ್ಟಿದೆ. ಇನ್ನು ತುಮಕೂರು (Tumkur) ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರದಲ್ಲೂ (Goravanahalli Maha Lakshmi Temple) ಸರತಿ ಸಾಲಿನಲ್ಲಿ ನಿಂತು ಭಕ್ತರು (Devotees) ಶ್ರೀ ಮಹಾಲಕ್ಷ್ಮಿ ದೇವಿಯ ದರ್ಶನ/ ಆಶಿರ್ವಾದ ಪಡೆಯುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ಅರ್ಚಕರಾದ ಸುಬ್ರಹ್ಮಣ್ಯ ಟಿವಿ9 ಗೆ ತಿಳಿಸಿದ್ದಾರೆ. ಗೊರವನಹಳ್ಳಿ ಕ್ಷೇತ್ರದ ಮಹಾಲಕ್ಷ್ಮಿ ಸಕಲ ಸಿದ್ದಿಯನ್ನ ಕೊಡುವ ತಾಯಿ ಎಂದು ಜನಜನಿತ.

ರಾಜ್ಯದ ಇತರೆ ಕಡೆಗಳಲ್ಲೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ವರಮಹಾಲಕ್ಷ್ಮಿ ಹಬ್ಬ/ವ್ರತವನ್ನು ಶ್ರಾವಣ‌ ಮಾಸದ ಎರಡನೇ ಶುಕ್ರವಾರವಾದ ಇಂದು ಆಚರಿಸಲಾಗುತ್ತದೆ. ರಾಜಧಾನಿ ಬೆಂಗಳೂರು ನಗರದ ಲಕ್ಷ್ಮಿ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆ ನಡೆದಿದೆ. ಮಹಾಲಕ್ಷ್ಮಿ ಲೇಔಟ್​ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ, ಪುಷ್ಪಭಿಷೇಕ ನೇರೆವೇರುತ್ತಿದ್ದು ವಿಶೇಷ ಅಲಂಕಾರದ ನಂತರ ಬರುವ ಭಕ್ತದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್​ನ ಲಕ್ಷ್ಮಿ ದೇವಸ್ಥಾನ, ಕೆ ಆರ್​ ಮಾರ್ಕೆಟ್​ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಇನ್ನು ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ಕನ್ನಡ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...