ತುಮಕೂರು: ನಡು ರಸ್ತೆಯಲ್ಲೇ ಯುವಕರ ವೀಲಿಂಗ್ ಹುಚ್ಚಾಟ; ಅಪಾಯಕಾರಿ ದೃಶ್ಯ ಮೊಬೈಲ್​ನಲ್ಲಿ ಸೆರೆ

ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: Mar 23, 2024 | 2:19 PM

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಈ ವೀಲಿಂಗ್(Wheeling)​ ಪುಂಡರ ಹಾವಳಿ ಹೆಚ್ಚಾಗಿದೆ. ಇದರಿಂದ ಕೆಲವು ಪಾದಚಾರಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕೊರಟಗೆರೆ-ತುಮಕೂರು ಹೆದ್ದಾರಿಯ ಅಜ್ಜಿಹಳ್ಳಿ ಬಳಿ ನಡು ರಸ್ತೆಯಲ್ಲೇ ಯುವಕ‘ರು ವೀಲಿಂಗ್ ಹುಚ್ಚಾಟ ಮೆರೆದಿದ್ದಾರೆ.

ತುಮಕೂರು, ಮಾ.23: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಈ ವೀಲಿಂಗ್(Wheeling)​ ಪುಂಡರ ಹಾವಳಿ ಹೆಚ್ಚಾಗಿದೆ. ಇದರಿಂದ ಕೆಲವು ಪಾದಚಾರಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕೊರಟಗೆರೆ-ತುಮಕೂರು ಹೆದ್ದಾರಿಯ ಅಜ್ಜಿಹಳ್ಳಿ ಬಳಿ ನಡು ರಸ್ತೆಯಲ್ಲೇ ಯುವಕ‘ರು ವೀಲಿಂಗ್ ಹುಚ್ಚಾಟ ಮೆರೆದಿದ್ದಾರೆ. ಇದರಿಂದ ಸಹ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.  ಈ ಅಪಾಯಕಾರಿ ವೀಲ್ಹಿಂಗ್ ದೃಶ್ಯ ಕಾರಿನಲ್ಲಿ ತೆರಳುತ್ತಿದ್ದವರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ನಡುರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೇ  ಯುವಕರು ವೀಲ್ಹಿಂಗ್ ಮಾಡಿದ್ದಾರೆ. ಈ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 23, 2024 02:19 PM
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...