ಪ್ರವಾಹದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ, ಶೃಂಗೇರಿ ಶಾರದಾಂಬೆ ದೇವಾಲಯದ ಪ್ರದೇಶ ಜಲಾವೃತ
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಚಿಕ್ಕಮಗಳೂರು ಜಿಲ್ಲೆಯ ತುಂಗಾ ನದಿಯು ಪ್ರವಾಹ ಮಟ್ಟ ಮೀರಿ ಹರಿಯುತ್ತಿದ್ದು, ಶೃಂಗೇರಿಯಲ್ಲಿರುವ ಶಾರದಾಂಬೆ ದೇಗುಲದ ಬಳಿಯ ಪ್ರದೇಶ ಜಲಾವೃತಗೊಂಡಿದೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ನದಿ ಒಳಹರಿವಿನಲ್ಲಿ ಭಾರಿ ಹೆಚ್ಚಳವಾಗಿದ್ದು, ಪ್ರವಾಹದ ಮಟ್ಟ ಮೀರಿ ನದಿ ಹರಿಯುತ್ತಿದೆ. ಪರಿಣಾಮವಾಗಿ ಶೃಂಗೇರಿಯಲ್ಲಿರುವ ಶಾರದಾಂಬೆ ದೇಗುಲದ ಬಳಿಯ ಪ್ರದೇಶ ಜಲಾವೃತಗೊಂಡಿದೆ. ದೇವಾಲಯದ ಪ್ಯಾರಲ್ ರಸ್ತೆ, ಪಾರ್ಕಿಂಗ್ ಪ್ರದೇಶಕ್ಕೆ ನದಿ ನೀರು ನುಗ್ಗಿದ್ದು, ನದಿಯ ಅಕ್ಕಪಕ್ಕದ ಅಂಗಡಿಗಳಿಗೂ ನದಿ ನೀರು ನುಗ್ಗಿದೆ.
ಇದನ್ನೂ ಓದಿ: Weather: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಕರ್ನಾಟಕ, ಗುಜರಾತ್ ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ
Latest Videos