ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದ್ದು, ಕೇವಲ 9 ಟಿಎಂಸಿ ನೀರು ಸಂಗ್ರಹ ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 24 ಟಿಎಂಸಿ ನೀರಿತ್ತು. ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾದ ಈ ಜಲಾಶಯದ ಕುಸಿತದಿಂದ ಕುಡಿಯುವ ನೀರು ಹಾಗೂ ಕೃಷಿಗೆ ತೀವ್ರ ತೊಂದರೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ.
ಕೊಪ್ಪಳ, ಜೂನ್ 12: ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಪ್ರಮಾಣದಲ್ಲಿ ಕುಸಿದಿದೆ. ಪ್ರಸ್ತುತ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಪ್ರಮಾಣವಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಜಲಾಶಯದಲ್ಲಿ 24 ಟಿಎಂಸಿ ನೀರಿತ್ತು. ಈ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರೂ, ಮಲೆನಾಡು ಭಾಗದಲ್ಲಿ ಮಳೆಯ ಕೊರತೆಯಿಂದ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ. ಕೇವಲ 9 ಟಿಎಂಸಿ ನೀರಿನಲ್ಲಿ ಕುಡಿಯುವ ನೀರು, ಕೃಷಿ ಹಾಗೂ ಜಲಚರಗಳಿಗೆ ನೀರು ಒದಗಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಪ್ರಸ್ತುತ ಕುಡಿಯುವ ನೀರು ಮತ್ತು ಕಾಲುವೆಗಳಿಗೆ ಸುಮಾರು 249 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ನೀರಿನ ಈ ಕೊರತೆಯು ಈ ನಾಲ್ಕು ಜಿಲ್ಲೆಗಳ ರೈತರಲ್ಲಿ ಮತ್ತು ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಮಾತ್ರ ಜಲಾಶಯಕ್ಕೆ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
