ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಶ್ರೀಕೃಷ್ಣದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ಮುಳುಗಡೆ
Karnataka Rains: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಆನೆಗೊಂದಿಯ ಐತಿಹಾಸಿಕ ಸ್ಮಾರಕಗಳು ಬಹುತೇಕ ಮುಳುಗಡೆಯಾಗಿವೆ. ನದಿಗೆ ಬೋಟ್ ಇಳಿಸಿದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ದಡದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲು ಸ್ಥಳೀಯರು ಆಗ್ರಹಿಸಿದ್ದಾರೆ. ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟ ಕಾರಣ ಆನೆಗೊಂದಿ ನವ ವೃಂದಾವನ ಸಂಪರ್ಕ ಕಡಿತಗೊಂಡಿದೆ.
ಕೊಪ್ಪಳ, ಆಗಸ್ಟ್ 20: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಒಳಹರಿವು ಹೆಚ್ಚಾಗಿದ್ದು, ತುಂಗಭದ್ರಾ ಡ್ಯಾಂನಿಂದ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯ ಐತಿಹಾಸಿಕ ಸ್ಮಾರಕಗಳು ಮುಳುಗಡೆ ಹಂತಕ್ಕೆ ಬಂದಿವೆ. ನವ ವೃಂದಾವನ ಬಳಿ ಇರುವ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗುತ್ತಿವೆ. ಶ್ರೀ ಕೃಷ್ಣ ದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ಬಹುತೇಕ ಮುಳುಗಡೆಯಾಗಿವೆ. ನವ ವೃಂದಾವನಕ್ಕೆ ಸಂಪರ್ಕ ಸೇತುವೆಯಾಗಿದ್ದ ಬೋಟ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
Published on: Aug 20, 2025 10:11 AM
Latest Videos
