ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಶ್ರೀಕೃಷ್ಣದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ಮುಳುಗಡೆ

Edited By:

Updated on: Aug 20, 2025 | 10:18 AM

Karnataka Rains: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಆನೆಗೊಂದಿಯ‌ ಐತಿಹಾಸಿಕ ಸ್ಮಾರಕಗಳು ಬಹುತೇಕ ಮುಳುಗಡೆಯಾಗಿವೆ. ನದಿಗೆ ಬೋಟ್ ಇಳಿಸಿದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ದಡದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲು ಸ್ಥಳೀಯರು ಆಗ್ರಹಿಸಿದ್ದಾರೆ. ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟ ಕಾರಣ ಆನೆಗೊಂದಿ ನವ ವೃಂದಾವನ ಸಂಪರ್ಕ ಕಡಿತಗೊಂಡಿದೆ.

ಕೊಪ್ಪಳ, ಆಗಸ್ಟ್ 20: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಒಳಹರಿವು ಹೆಚ್ಚಾಗಿದ್ದು, ತುಂಗಭದ್ರಾ ಡ್ಯಾಂನಿಂದ ನದಿಗೆ ಅಪಾರ ಪ್ರಮಾಣದ‌ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯ‌ ಐತಿಹಾಸಿಕ ಸ್ಮಾರಕಗಳು ಮುಳುಗಡೆ ಹಂತಕ್ಕೆ ಬಂದಿವೆ. ನವ ವೃಂದಾವನ ಬಳಿ ಇರುವ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗುತ್ತಿವೆ. ಶ್ರೀ ಕೃಷ್ಣ ದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ಬಹುತೇಕ ಮುಳುಗಡೆಯಾಗಿವೆ. ನವ ವೃಂದಾವನಕ್ಕೆ ಸಂಪರ್ಕ ಸೇತುವೆಯಾಗಿದ್ದ ಬೋಟ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 20, 2025 10:11 AM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More