AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯದ ಹೊಸ ಗೇಟ್‌ಗಳ ಉದ್ಘಾಟನೆ

ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ತುಂಗಭದ್ರಾ ಜಲಾಶಯದ ಹೊಸ ಗೇಟ್‌ಗಳ ಉದ್ಘಾಟನೆ

ಅಕ್ಷಯ್​ ಪಲ್ಲಮಜಲು​​
|

Updated on: Jun 25, 2026 | 1:36 PM

Share

ತುಂಗಭದ್ರಾ ಜಲಾಶಯದ 18, 19, 20, 21ನೇ ನೂತನ ಕ್ರಸ್ಟ್ ಗೇಟ್‌ಗಳನ್ನು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಅವರು ಕೊಪ್ಪಳದ ಮುನಿರಾಬಾದ್‌ನಲ್ಲಿ ಲೋಕಾರ್ಪಣೆ ಮಾಡಿದರು. ಇದು ಜಲಾಶಯದ ಆಧುನೀಕರಣದ ಪ್ರಮುಖ ಮೈಲಿಗಲ್ಲು.

ಮುಖ್ಯಾಂಶಗಳು

  • ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್‌ಗಳನ್ನು ಅದ್ಧೂರಿಯಾಗಿ ಲೋಕಾರ್ಪಣೆ
  • ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ
  • ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ

ಕೊಪ್ಪಳ, ಜೂ.25: ಮುನಿರಾಬಾದ್‌ನಲ್ಲಿರುವ ಐತಿಹಾಸಿಕ ತುಂಗಭದ್ರಾ ಜಲಾಶಯದಲ್ಲಿ ಹೊಸ 18, 19, 20, 21ನೇ ಕ್ರಸ್ಟ್ ಗೇಟ್‌ಗಳನ್ನು ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲಾಯಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ಭಾಗವಹಿಸಿದ್ದರು. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಅವರು ಜಂಟಿಯಾಗಿ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ ನೆರವೇರಿಸಿದರು. ಗೇಟ್‌ಗಳ ಬಟನ್ ಒತ್ತುವ ಮೂಲಕ ಈ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಮಾಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ, ತುಂಗಭದ್ರಾ ಜಲಾಶಯದ ಅಧಿಕಾರಿಗಳು ನೂತನ ಕ್ರಸ್ಟ್ ಗೇಟ್‌ಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಈ ಲೋಕಾರ್ಪಣೆಯು ಜಲಾಶಯದ ನೀರು ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಪ್ರದೇಶದ ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಮೂಲಕ ತುಂಗಭದ್ರಾ ಜಲಾಶಯದ ಸುದೀರ್ಘ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಸೇರ್ಪಡೆಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us