ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಭಾಗ್ಯ, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇನ್ನು 52 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ 33 ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿಯಾಗಿದೆ. ಇನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಟಿಬಿ ಡ್ಯಾಂಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಕೊಪ್ಪಳ, (ಡಿಸೆಂಬರ್ 29): ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra reservoir )ಒಟ್ಟು 33 ಕ್ರಸ್ಟ್ ಗೇಟ್ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇನ್ನು 52 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ 33 ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿಯಾಗಿದೆ. ಇನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಟಿಬಿ ಡ್ಯಾಂಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
