ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ

Edited By:

Updated on: Jul 05, 2026 | 4:20 PM

ಮುಖ್ಯಾಂಶಗಳು

  • 3 ದಿನಗಳಿಂದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ
  • ಭರ್ತಿಯಾದ ಗಾಜನೂರಿನ ತುಂಗಾ ಜಲಾಶಯದಿಂದ ನದಿಗೆ ನೀರು
  • ಸಂಪೂರ್ಣ ಬತ್ತಿಹೋಗಿದ್ದ ತುಂಗಾ ನದಿಗೆ ಮತ್ತೆ ಜೀವ ಕಳೆ

ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ.

ದಾವಣಗೆರೆ, (ಜುಲೈ 05): ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 3.24 ಟಿಎಂಸಿ ಸಾಮರ್ಥ್ಯ ಗಾಜನೂರಿನ ತುಂಗಾ ಜಲಾಶಯವು ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಭರ್ತಿಯಾಗುತ್ತಿತ್ತು. ಆದ್ರೆ ಬಾರಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಒಂದು ತಿಂಗಳು ತಡವಾಗಿ ಅಂದ್ರೆ ಜುಲೈ ಮೊದಲ ವಾರದಲ್ಲಿ ತುಂಗಾ ಜಲಾಶಯ ತುಂಬಿದೆ. ಇದರಿಂದ 10 ಗೇಟ್ ಓಪನ್ ಮಾಡಿ 20 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದ್ದು. ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ಎರಡು ಮೂರು ದಿನಗಳ ಹಿಂದ ಸಂಪೂರ್ಣ ಖಾಲಿಯಾಗಿದ್ದ ತುಂಗಭದ್ರ ನದಿಗೆ ಕೊನೆಗೂ ನೀರು ಬಿಟ್ಟಿರಿವುದರಿಂದ ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ, ನ್ಯಾಮತಿ ತಾಲೂಕಿನ ಜನರು ಫುಲ್ ಖುಷ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 05, 2026 02:43 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More