Video: ಟರ್ಕಿಯ ಕೆಫೆಯಲ್ಲಿ ಕುಳಿತಿದ್ದ ಕ್ಲಬ್ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

Updated on: May 06, 2026 | 8:11 AM

ಟರ್ಕಿಯ ಕೆಫೆಯೊಂದರಲ್ಲಿ ಅಲ್ಮೆಡಾಗ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಟುಂಕೆ ಮೆರಿಕ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಮೆರಿಕ್ ಅವರು ಕೆಫೆಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಅವರ ತಲೆಯನ್ನೇ ಗುರಿಯಾಗಿಸಿಕೊಂಡು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ಮೆರಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಲಭ್ಯವಾಗಿಲ್ಲದಿದ್ದರೂ, ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಇಸ್ತಾನ್​ಬುಲ್, ಮೇ 06: ಟರ್ಕಿಯ ಕೆಫೆಯೊಂದರಲ್ಲಿ ಅಲ್ಮೆಡಾಗ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಟುಂಕೆ ಮೆರಿಕ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಮೆರಿಕ್ ಅವರು ಕೆಫೆಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಅವರ ತಲೆಯನ್ನೇ ಗುರಿಯಾಗಿಸಿಕೊಂಡು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಗುಂಡಿನ ದಾಳಿಯಿಂದ ಮೆರಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಲಭ್ಯವಾಗಿಲ್ಲದಿದ್ದರೂ, ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಘಟನೆಯು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಹತ್ಯೆಯ ಹಿಂದಿನ ಉದ್ದೇಶವೇನೆಂದು ತಿಳಿಯಲು ತನಿಖೆ ತೀವ್ರಗೊಂಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More