ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ

Updated on: Apr 15, 2026 | 9:54 PM

ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿ ತನ್ನ ಬ್ಯಾಗ್‌ನಲ್ಲಿ ತನ್ನ ತಂದೆಯ ಗನ್ ತಂದಿದ್ದ. ಗುಂಡು ಹಾರಿಸಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನವದೆಹಲಿ, ಏಪ್ರಿಲ್ 15: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಮಾಧ್ಯಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿ ತನ್ನ ಬ್ಯಾಗ್‌ನಲ್ಲಿ ತನ್ನ ತಂದೆಯ ಗನ್ ತಂದಿದ್ದ. ಗುಂಡು ಹಾರಿಸಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

Published on: Apr 15, 2026 09:49 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More