Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Summit 2025: ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?

TV9 Education Summit 2025: ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?

ಗಂಗಾಧರ​ ಬ. ಸಾಬೋಜಿ
|

Updated on: Apr 05, 2025 | 2:29 PM

ಟಿವಿ9 ಎಜುಕೇಶನ್ ಎಕ್ಸ್‌ಪೋ ಬೆಂಗಳೂರಿನಲ್ಲಿ ನಡೆಯುತ್ತಿದೆ. ಪಿಯುಸಿ ಪರೀಕ್ಷೆ ಮುಗಿಸಿ ಸಿಇಟಿಗೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ವಿವಿಧ ಕಾಲೇಜುಗಳು, ಕೋರ್ಸುಗಳು ಮತ್ತು ವೃತ್ತಿಪರ ಮಾರ್ಗದರ್ಶನ ಪಡೆದುಕೊಳ್ಳಬಹುದು. ಟಿವಿ9, ಕೆಎಲ್ ಡೀಮ್ಡ್ ವಿಶ್ವವಿದ್ಯಾಲಯ ಹಾಗೂ ಇತರ ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಿವೆ.

ಬೆಂಗಳೂರು, ಏಪ್ರಿಲ್ 05: ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಿನ್ನೆಯಿಂದ ಟಿವಿ9 ಎಜುಕೇಶನ್ ಎಕ್ಸ್‌ಪೋ (TV9 Education Expo) ಆರಂಭವಾಗಿದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಈ ಎಕ್ಸ್‌ಪೋ ದಲ್ಲಿ ಭಾಗವಹಿಸಿವೆ. ಆ ಮೂಲಕ ಎಸ್​ಎಸ್​ಎಲ್​ಸಿ, ಪಿಯುಸಿ, ಇಂಜಿನಿಯರಿಂಗ್ ಸೇರಿದಂತೆ ಮುಂದಿನ ಶಿಕ್ಷಣದ ಬಗ್ಗೆ ಒಂದೇ ಸೂರಿನಡಿ ಮಾಹಿತಿ ನೀಡಲಾಗುತ್ತಿದೆ. ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು ತಮಗೆ ಇಷ್ಟವಾದ ಕಾಲೇಜು, ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಸಿಎಂಆರ್​ ವಿಶ್ವವಿದ್ಯಾಲಯದ ಶಿಕ್ಷಕರೊಬ್ಬರು ಮಾತನಾಡಿದ್ದು, ಟಿವಿ9 ಸಹಭಾಗಿತ್ವದಲ್ಲಿ ಎಜುಕೇಶನ್ ಎಕ್ಸ್‌ಪೋ ನಡೆಯುತ್ತಿದೆ. ಇದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಒಳ್ಳೆಯ ವೇದಿಕೆ ಆಗಿದೆ. ಟಿವಿ9 ಎಜುಕೇಶನ್ ಎಕ್ಸ್‌ಪೋದಲ್ಲಿ ಭಾಗವಹಿಸುವ ಮೂಲಕ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.